Advertisement
ಕೆಮ್ಮು ಶುರುವಾದಾಗ ಬೆಚ್ಚಗಿನ ನೀರನ್ನು ಕುಡಿಯುವುದು ಉತ್ತಮ. ಇದರಿಂದ ಗಂಟಲಿನ ಉರಿಯೂತ ಕಡಿಮೆಯಾಗುತ್ತದೆ.
Related Articles
Advertisement
ನಿಂಬೆ, ಕಲ್ಲು ಸಕ್ಕರೆ ಮತ್ತು ಕಾಳುಮೆಣಸನ್ನು ಸೇರಿಸಿ ಗಟ್ಟಿಯಾದ ಪಾಕವನ್ನು ಮಾಡಿಕೊಳ್ಳಬೇಕು. ಈ ಪಾಕವನ್ನು ದಿನವೂ 2 ಚಮಚ ಸೇವಿಸುತ್ತಾ ಬಂದರೆ ಕಫ ಕಡಿಮೆಯಾಗುವುದಲ್ಲದೇ ಕೆಮ್ಮಿನ ಸಮಸ್ಯೆ ದೂರವಾಗುತ್ತದೆ.
ಶುಂಠಿಯ ಚಹಾವನ್ನು ಮಾಡಿ ಕುಡಿಯುವುದರಿಂದ ಸಹ ನೆಗಡಿ ಮತ್ತು ಕಫವನ್ನು ನಿವಾರಿಸಿಕೊಳ್ಳಬಹುದು.
ಒಂದು ಲೋಟ ನೀರಿಗೆ ಶುಂಠಿ, ನಿಂಬೆ ರಸ, ಕಾಳು ಮೆಣಸು ಮತ್ತು ಬೆಲ್ಲವನ್ನು ಹಾಕಿ ಕುದಿಸಬೇಕು. ಇದನ್ನು ಬಿಸಿ ಆರುವ ಮುನ್ನವೇ ಕುಡಿಯುವುದರಿಂದ ನೆಗಡಿ ಮತ್ತು ಕಫ ಕಡಿಮೆಯಾಗುತ್ತದೆ.
ಬಿಸಿ ನೀರಿಗೆ ಉಪ್ಪನ್ನು ಸೇರಿಸಿ ಬಾಯಿ ಮುಕ್ಕಳಿಸುವುದರಿಂದ ಗಂಟಲು ನೋವು ನಿವಾರಣೆಯಾಗುತ್ತದೆ.
ಇನ್ನು ಒಣ ಕೆಮ್ಮು ಇದ್ದರೆ ಏಲಕ್ಕಿ ಮತ್ತು ಶುಂಠಿ ಪುಡಿಯನ್ನು ಸೇರಿಸಿಕೊಂಡು ಸೇವಿಸುವುದು ಉತ್ತಮ.
ಹಾಗೆಯೇ ನೆಲ್ಲಿಕಾಯಿಯನ್ನು ಸೇವಿಸುತ್ತಿದ್ದರೆ ನೆಗಡಿ, ಕೆಮ್ಮು, ಕಫದ ಸಮಸ್ಯೆಯಿಂದ ದೂರವಿರಬಹುದು.
ಬಿಸಿ ಹಾಲಿಗೆ ಅರಿಶಿಣ ಮತ್ತು ಕಲ್ಲು ಸಕ್ಕರೆಯನ್ನು ಬೆರೆಸಿ ರಾತ್ರಿ ಮಲಗುವ ಮುನ್ನ ಕುಡಿದರೂ ಕಫ ಮತ್ತು ನೆಗಡಿ ಕಡಿಮೆಯಾಗುತ್ತದೆ.
ಜೇನು ಮತ್ತು ನಿಂಬೆರಸದೊಂದಿಗೆ ದಾಲ್ಚಿನಿಯನ್ನು ಸೇರಿಸಿ ಸೇವಿಸಿದರೂ ನೆಗಡಿ ಮತ್ತು ಕಫದ ಸಮಸ್ಯೆ ದೂರವಾಗುತ್ತದೆ.
ಕೆಮ್ಮು ಉಂಟಾಗುವ ಸಂದರ್ಭದಲ್ಲಿ ಕಲ್ಲು ಸಕ್ಕರೆ ಮತ್ತು ಲವಂಗವನ್ನು ಸೇವಿಸಿದರೆ ಸಮಸ್ಯೆ ಕಡಿಮೆಯಾಗುತ್ತದೆ.