Advertisement

ಪಾದಯಾತ್ರೆ ಕರೋನಾ ಯಾತ್ರೆ ಆಗುವುದು ಬೇಡ: ಗೃಹ ಸಚಿವ ಆರಗ ಜ್ಞಾನೇಂದ್ರ

10:40 AM Jan 12, 2022 | Team Udayavani |

ಬೆಂಗಳೂರು: ಪಾದಯಾತ್ರೆ ಕರೋನಾ ಯಾತ್ರೆ ಆಗುವುದು ಬೇಡ, ದಯವಿಟ್ಟು ನಿಮ್ಮ ರಾಜಕೀಯ ಉದ್ದೇಶದ ನಡಿಗೆ ಕಾರ್ಯಕ್ರಮವನ್ನು ಕೈಬಿಡಿ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕಾಂಗ್ರೆಸ್ ನಾಯಕರಿಗೆ ಕರೆ ನೀಡಿದ್ದಾರೆ.

Advertisement

ಈ ಬಗ್ಗೆ ಮಾತಾನಾಡಿರುವ ಅವರು, ಆರಂಭದಲ್ಲಿ, ಇವರು, ಪಾದಯಾತ್ರೆ ಆರಂಭಿಸಿದಾಗ, ನಮಗೆ ಸಾರ್ವಜನಿಕರ ಆರೋಗ್ಯದ ಮೇಲೆ ಬೀರಬಹುದಾದ ಅಡ್ಡ. ಪರಿಣಾಮದ ಬಗ್ಗೆ, ಆತಂಕ ಇತ್ತು. ಆ ಕಾರಣದಿಂದ ನಾವು ಕಾರ್ಯಕ್ರಮವನ್ನು ಮುಂದಕ್ಕೆ ಹಾಕಿಕೊಳ್ಳಿ ಎಂದು, ಕಾಂಗ್ರೆಸ್ ನಾಯಕರಿಗೆ ಮನವಿ ಮಾಡಿದ್ದೆವು. ಈಗ ನಮ್ಮ ಆತಂಕ ನಿಜವಾಗುತ್ತಿದೆ, ಕರೋನಾ ಬಗ್ಗೆ ಕಾಂಗ್ರೆಸ್ ನಾಯಕರು ಅಪ ಪ್ರಚಾರ ಮಾಡುತ್ತಿರುವುದಲ್ಲದೆ  ವಿತಂಡ ವಾದ ಮಂಡಿಸುತ್ತಿದ್ದಾರೆ ಎಂದರು.

ಪಾದಯಾತ್ರೆಯಲ್ಲಿ ತೊಡಗಿಕೊಂಡಿದ್ದ ಕೆಲವು ನಾಯಕರಿಗೆ ಸೋಂಕು ತಗುಲಿದ್ದು, ಆಸ್ಪತ್ರೆ ಸೇರಿದ್ದಾರೆ. ಆ ಕಾರಣದಿಂದ ಮತ್ತೊಮ್ಮೆ ಕಾಂಗ್ರೆಸ್ ನಾಯಕರಿಗೆ, ಮನವಿ ಮಾಡುತ್ತೇನೆ, ನಿಮ್ಮ ನಿರ್ಧಾರವನ್ನು ಸಾರ್ವಜನಿಕರ ಆರೋಗ್ಯ ರಕ್ಷಣೆಯ ದೃಷ್ಟಿಯಿಂದ, ಪಾದಯಾತ್ರೆ ಕಾರ್ಯಕ್ರಮ ವನ್ನು, ಕೈಬಿಡಿ. ಕರೋನಾ, ಅಪಾಯಕಾರಿ ರೀತಿಯಲ್ಲಿ ಹರಡುತ್ತಿದೆ,   ಸಮಾಜದ ಎಲ್ಲಾ ಜನರೂ, ವಿಶೇಷವಾಗಿ, ಎಲ್ಲಾ ಕ್ಷೇತ್ರದ  ಶ್ರಮಿಕ ವರ್ಗದವರೂ ಆತಂಕಗೊಂಡಿದ್ದಾರೆ. ಈಗಾಗಲೇ ನೀವು ಜನತೆಯ ಆಕ್ರೋಶಕ್ಕೆ ಗುರಿಯಾಗಿದ್ದು ಅವರ ಕ್ಷಮೆ ಕೇಳಬೇಕಾಗಿದೆ, ಎಂದು ಸಚಿವರು, ತಿಳಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next