ಚಿಕ್ಕಮಗಳೂರು : ಕೋವಿಡ್ ಪ್ರಕರಣಗಳು ಹೆಚ್ಚಾದರೆ ಸರ್ಕಾರಕ್ಕೆ ಲಾಕ್ ಡೌನ್ ಅನಿವಾರ್ಯ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ನಗರದಲ್ಲಿ ಮಕ್ಕಳ ಲಸಿಕಾಕರಣಕ್ಕೆ ಚಾಲನೆ ನೀಡಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಕೋವಿಡ್ ನಿಯಂತ್ರಣದಲ್ಲಿ ವಿಷಯದಲ್ಲಿ ಜನರು ಸಹಕಾರ ಕೊಡದಿದ್ದರೆ ಲಾಕ್ ಡೌನ್ ಅನಿವಾರ್ಯ, ಜನರ ಜೀವ ಉಳಿಸುವುದು ಸರ್ಕಾರದ ಬದ್ಧತೆ ಆಗಿದೆ. ಜನ ಕೋವಿಡ್ ನಿಯಮಗಳನ್ನು ಪಾಲನೆ ಮಾಡಬೇಕು ಎಂದರು.
ಇದನ್ನೂ ಓದಿ: ಕೊಪ್ಪ: ಕಾಲೇಜಿಗೆ ಕೇಸರಿ ಶಾಲು ಹಾಕಿಕೊಂಡು ಬಂದ ವಿದ್ಯಾರ್ಥಿಗಳು
ಕಾಂಗ್ರೆಸ್ ಪಕ್ಷದಿಂದ ನಡೆಯುತ್ತಿರುವ ಪಾದಯಾತ್ರೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಪಾದಯಾತ್ರೆಗೆ ಅನುಮತಿ ಕೊಡುವುದು ಬಿಡುವುದು ಬೇರೆ ವಿಚಾರ ಆದರೆ ಕೋವಿಡ್ ಸಮಯದಲ್ಲಿ ರಾಜಕಾರಣದ ನಡೆಯನ್ನು ಮುಂದೂಡುವುದು ಒಳ್ಳೆಯದು. ವಿರೋಧ ಪಕ್ಷವಾಗಿ ಹೋರಾಟ ಮಾಡಲು ಅವರಿಗೆ ಅವಕಾಶವಿದೆ. ಕಾಂಗ್ರೆಸ್ ನವರು ಅಧಿಕಾರದಲ್ಲಿದ್ದಾಗ ಏನು ಮಾಡಲಿಲ್ಲ. ಈ ಸಮಯದಲ್ಲಿ ರಾಜಕೀಯ ನಡೆ ಬಿಟ್ಟು ಕೋವಿಡ್ ನಿಯಮಗಳನ್ನು ಪಾಲಿಸಬೇಕೆಂದು ಮನವಿ ಮಾಡಿದರು.
ಸಿಎಂ ಬದಲಾವಣೆ, ಸಚಿವರ ಕೈಬಿಡುವ ವಿಚಾರವೆಲ್ಲ ಗಾಳಿ ಸುದ್ದಿ. ಬೊಮ್ಮಾಯಿ ಸರ್ಕಾರದಲ್ಲಿ ಯಾವ ಸಚಿವರನ್ನೂ ಕೈ ಬಿಡುವುದಿಲ್ಲ,ಗೃಹ ಇಲಾಖೆ ತೃಪ್ತಿ ಕೊಟ್ಟಿದೆ, ಚಾಲೆಂಜ್ ಕೂಡ ಆಗಿದೆ ಎಂದು ಹೇಳಿದರು.