ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ನವದೆಹಲಿಯಲ್ಲಿ ಮಣಿಪುರದ ಪರಿಸ್ಥಿತಿ ಕುರಿತು ಚರ್ಚಿಸಲು ಕರೆದಿದ್ದ ಸರ್ವಪಕ್ಷಗಳ ಸಭೆ ಆರಂಭಗೊಂಡಿದೆ.
ಮಧ್ಯಾಹ್ನ ಮೂರು ಗಂಟೆಗೆ ಸಭೆ ಆರಂಭಗೊಂಡಿದ್ದು ಮಣಿಪುರದಲ್ಲಿ ನಡೆದ ಹಿಂಸಾಚಾರದ ಸದ್ಯದ ಪರಿಸ್ಥಿತಿ ಕುರಿತು ಚರ್ಚೆ ನಡೆಯಲಿದೆ.
ಶಾ ಈ ಹಿಂದೆ ಹಿಂಸಾಚಾರ ಪೀಡಿತ ರಾಜ್ಯಕ್ಕೆ ಮೇ 29 ರಂದು ಕುಕಿ ಮತ್ತು ಮೈಟೈ ಸಮುದಾಯಗಳ ಸದಸ್ಯರು ಸೇರಿದಂತೆ ಹಲವಾರು ಮುಖಂಡರನ್ನು ಭೇಟಿಯಾಗಿದ್ದರು. ಮೇ 3 ರಿಂದ ರಾಜ್ಯದಲ್ಲಿ ಜನಾಂಗೀಯ ಘರ್ಷಣೆ ನಡೆದಿದ್ದು ಈ ಸಮಯದಲ್ಲಿ ಕನಿಷ್ಠ 90 ಜನರು ಸಾವನ್ನಪ್ಪಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಕೆ.ಸಂಗ್ಮಾ, ಸಿಪಿಐ(ಎಂ) ಸಂಸದ ಜಾನ್ ಬ್ರಿಟಾಸ್ ಸೇರಿದಂತೆ ಹಲವು ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು.
ಇದೆಲ್ಲದರ ನಡುವೆ ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ ನಿಯಂತ್ರಿಸುವಲ್ಲಿ ರಾಜ್ಯ ಹಾಗೂ ಕೇಂದ್ರ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸುತ್ತಿವೆ.
ಇದನ್ನೂ ಓದಿ: Agra: ಟ್ರ್ಯಾಕ್ಟರ್‌ಗೆ ಢಿಕ್ಕಿ ಹೊಡೆದು ಹಳಿ ತಪ್ಪಿದ ಗೂಡ್ಸ್ ರೈಲು, 6 ಮಂದಿಗೆ ಗಾಯ