ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಮೂರು ಕೃಷಿ ಕಾಯ್ದೆಯನ್ನು ವಿರೋಧಿಸಿ ಜನವರಿ 26ರಂದು ದೆಹಲಿಯಲ್ಲಿ ರೈತ ಸಂಘಟನೆಗಳು ನಡೆಸಿದ ಟ್ರ್ಯಾಕ್ಟರ್ ರಾಲಿ ವೇಳೆ ನಡೆದ ಹಿಂಸಾಚಾರದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಪೊಲೀಸ್ ಸಿಬಂದಿಗಳನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ(ಜನವರಿ 26, 2021) ಭೇಟಿಯಾಗಿ ವಿಚಾರಿಸಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಎಂಐ ಫೋನ್ ಕಂಪನಿಯಿಂದ ಬಡ ವಿದ್ಯಾರ್ಥಿಗಳಿಗೆ ಫೋನ್‍ಗಳ ದೇಣಿಗೆ
ಅಮಿತ್ ಶಾ ಅವರು ಶುಶ್ರುತ್ ಟ್ರೌಮಾ ಸೆಂಟರ್ ಮತ್ತು ತೀರ್ಥ್ ರಾಮ್ ಆಸ್ಪತ್ರೆಗೆ ಭೇಟಿಯಾಗಿ ಗಾಯಗೊಂಡಿದ್ದ ಪೊಲೀಸರ ಆರೋಗ್ಯ ಕುರಿತು ಮಾಹಿತಿ ಪಡೆದಿರುವುದಾಗಿ ವರದಿ ವಿವರಿಸಿದೆ.
ರೈತರ ಟ್ರ್ಯಾಕ್ಟರ್ ಪರೇಡ್ ನಲ್ಲಿ ಸಂಭವಿಸಿದ ಹಿಂಸಾಚಾರದಲ್ಲಿ ಸುಮಾರು 400 ಪೊಲೀಸರು ಗಾಯಗೊಂಡಿದ್ದರು. ಬಳಿಕ ಅವರನ್ನು ಎರಡು ಆಸ್ಪತ್ರೆಗಳಿಗೆ ದಾಖಲಿಸಲಾಗಿತ್ತು.
ರೈತ ಮುಖಂಡರು ಪ್ರಚೋದನಕಾರಿ ಭಾಷಣ ಮಾಡುವ ಮೂಲಕ ಟ್ರ್ಯಾಕ್ಟರ್ ರಾಲಿ ಸಂದರ್ಭದಲ್ಲಿ ಹಿಂಸಾಚಾರಕ್ಕೆ ಕುಮ್ಮಕ್ಕು ನೀಡಿದ್ದು, ಈ ಘಟನೆಯಲ್ಲಿ 394 ಪೊಲೀಸರು ಗಾಯಗೊಂಡಿರುವುದಾಗಿ ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದು, ಈ ಕೃತ್ಯದಲ್ಲಿ ಶಾಮೀಲಾದ ಆರೋಪಿಗಳನ್ನು ನುಣುಚಿಕೊಳ್ಳಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿರುವುದಾಗಿ ವರದಿ ತಿಳಿಸಿದೆ.