ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಾ. 18 ಮತ್ತು 19 ರಂದು ಗುಜರಾತ್‌ಗೆ ಎರಡು ದಿನಗಳ ಭೇಟಿ ನೀಡಲಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಅವರು ಡೈರಿ ಉದ್ಯಮ ಸಮಾವೇಶ ಮತ್ತು ಎರಡು ವಿಶ್ವವಿದ್ಯಾಲಯಗಳ ಘಟಿಕೋತ್ಸವ ಸೇರಿದಂತೆ ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಮಾ. 18 ರಂದು, ಗೃಹ ಸಚಿವರು ಗಾಂಧಿನಗರದಲ್ಲಿ ಭಾರತೀಯ ಡೈರಿ ಅಸೋಸಿಯೇಷನ್ ಆಯೋಜಿಸಿರುವ 49 ನೇ ಡೈರಿ ಉದ್ಯಮ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.
ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲ್ವಿಚಾರಣಾ ಸಮಿತಿ (ದಿಶಾ) ಸಭೆಯಲ್ಲಿ ಭಾಗವಹಿಸುತ್ತಾರೆ ಮತ್ತು ಗಾಂಧಿನಗರ ಸಿವಿಲ್ ಆಸ್ಪತ್ರೆಯಲ್ಲಿ ಉಚಿತ ಆಹಾರ ಅಭಿಯಾನವನ್ನು ಉದ್ಘಾಟಿಸಲಿದ್ದಾರೆ.
Related Articles
ವಡೋದರಾದ ಮಹಾರಾಜ ಸಯಾಜಿರಾವ್ ವಿಶ್ವವಿದ್ಯಾನಿಲಯದ ಘಟಿಕೋತ್ಸವದಲ್ಲಿ ಪಾಲ್ಗೊಳ್ಳುವ ಮುನ್ನ ಶಾ ಅವರು ನರದಿಪುರ ಕೊಳವನ್ನು ಉದ್ಘಾಟಿಸಲಿದ್ದಾರೆ ಮತ್ತು ವಾಸನ್ ಕೊಳ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಇ-ಉದ್ಘಾಟನೆ ಮಾಡಲಿದ್ದಾರೆ.
ಮಾ. 19 ರಂದು, ಗೃಹ ಸಚಿವರು ಜುನಾಗಢ್‌ನಲ್ಲಿ ಎಪಿಎಂಸಿ ಕಿಶನ್ ಭವನವನ್ನು ಉದ್ಘಾಟಿಸಿ ಬಳಿಕ ಜುನಾಗಡ್ ಜಿಲ್ಲಾ ಬ್ಯಾಂಕ್‌ನ ಪ್ರಧಾನ ಕಛೇರಿಯ ಶಂಕುಸ್ಥಾಪನೆಯನ್ನು ನೆರವೇರಿಸಲಿದ್ದಾರೆ.
ಸಚಿವ ಅಮಿತ್ ಶಾ ಅವರು ಸೋಮನಾಥ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಲಿದ್ದು, ಸೋಮನಾಥ ಟ್ರಸ್ಟ್‌ನ ಮೊಬೈಲ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಲಿದ್ದಾರೆ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಾ. 19 ರ ಸಂಜೆ ಗುಜರಾತ್ ಕೇಂದ್ರೀಯ ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭದಲ್ಲಿ ಸಚಿವರು ಪಾಲ್ಗೊಳ್ಳಲಿದ್ದಾರೆ.
ಇದನ್ನೂ ಓದಿ:ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಕಾರು ಪಲ್ಟಿ: ಚಾಲಕ ಸ್ಥಳದಲ್ಲೇ ಸಾವು, ಮೂವರಿಗೆ ಗಾಯ