Advertisement

ಉಡುಪಿ: ಉಸ್ತುವಾರಿ ಸಚಿವ ಬೊಮ್ಮಾಯಿ ವಿಡಿಯೋ ಕಾನ‍್ಫೆರನ್ಸ್ ಸಭೆ

11:15 PM Aug 20, 2020 | Hari Prasad |

ಉಡುಪಿ: ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಇಂದು ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು.

Advertisement

ಈ ಸಂದರ್ಭದಲ್ಲಿ ಸಚಿವರು ಜಿಲ್ಲೆಯಲ್ಲಿನ ನೆರೆ ಮತ್ತು ಪ್ರವಾಹ ಸ್ಥಿತಿಗತಿಗಳ ಮಾಹಿತಿಯನ್ನು ಪಡೆದುಕೊಂಡರು.

ಈ ಸಂದರ್ಭದಲ್ಲಿ, ಬೈಂದೂರು ಕಿರಿಮಂಜೇಶ್ವರದಲ್ಲಿ ದೋಣಿ ದುರಂತದಿಂದ ಮೃತರಾದ ಕುಟುಂಬಗಳಿಗೆ ಮುಖ್ಯಮಂತ್ರಿಗಳ ವಿಶೇಷ ಹೆಚ್ಚುವರಿ ಪರಿಹಾರ ಕೊಡಿಸುವ ಸಲುವಾಗಿ ತಕ್ಷಣ ಪ್ರಸ್ತಾವನೆ ಸಲ್ಲಿಸುವಂತೆ ಸಚಿವ ಬೊಮ್ಮಾಯಿ ಅವರು ಸೂಚಿಸಿದರು.

ಮನೆಯಿಂದ ಹಾನಿಗೊಳಗಾದ ಮನೆಗಳ ಕೂಲಂಕಷ ಸರ್ವೆ ಹಾಗೂ ‘ಎ’, ‘ಬಿ’, ‘ಸಿ’ ವರ್ಗೀಕರಣದ ವೇಳೆ ಗರಿಷ್ಠ ಪರಿಹಾರ ನೀಡಲು ಕ್ರಮ ವಹಿಸುವಂತೆಯೂ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು. ಬೆಳೆ ಹಾನಿ ಸಮೀಕ್ಷೆಗೆ ವಿಶೇಷ ಗಮನ ಹರಿಸುವಂತೆಯೂ ಉಸ್ತುವಾರಿ ಸಚಿವರು ಇದೇ ಸಂದರ್ಭದಲ್ಲಿ ಸೂಚಿಸಿದರು.

ಕೊವಿಡ್ 19 ಸೋಂಕು ನಿರ್ವಹಣೆಯಲ್ಲಿ ಸಂಗ್ರಹಣಾ ಸಾಮರ್ಥ್ಯ ಹೆಚ್ಚಿಸಿಕೊಂಡು ಆಕ್ಸಿಜನ್ ಕೊರತೆಯಾಗದಂತೆ ನೋಡಿಕೊಳ್ಳಬೇಕೆಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

Advertisement

ಇನ್ನು, ಪ್ರಾಕೃತಿಕ ವಿಕೋಪ, ಕೃಷಿ ಚಟುವಟಿಕೆ, ಕೋವಿಡ್ ನಿರ್ವಹಣೆ ಮತ್ತಿತರ ವಿಷಯಗಳ ಬಗ್ಗೆ ಸಚಿವರು ಈ ವಿಡಿಯೀ ಕಾನ್ಫೆರೆನ್ಸ್ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಸಿದರು.

ಸಭೆಯಲ್ಲಿ ಮಾನ್ಯ ಅಪರ ಜಿಲ್ಲಾಧಿಕಾರಿಗಳಾದ ಶ್ರೀ ಸದಾಶಿವ ಪ್ರಭು, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳಾದ ಶ್ರೀ ಕಿರಣ್ ಫಡ್ನೇಕರ್, ಜಿಲ್ಲಾ ಪೋಲಿಸ್ ಅಧೀಕ್ಷಕರಾದ ಶ್ರೀ ವಿಷ್ಣುವರ್ಧನ್, ಉಪ ವಿಭಾಗಾಧಿಕಾರಿಗಳಾದ ಶ್ರೀ ರಾಜು ಕೆ., ಜಿಲ್ಲಾ ಆರೋಗ್ಯ ಅಧಿಕಾರಿ ಶ್ರೀ ಸುಧೀರ್ ಸೂಡ, ಕೃಷಿ ಉಪ ನಿರ್ದೇಶಕರಾದ ಶ್ರೀ ಕೆಂಪೇಗೌಡ, ಹಿರಿಯ ತೋಟಗಾರಿಕಾ ಅಧಿಕಾರಿಗಳಾದ ಶ್ರೀಮತಿ ಭುವನೇಶ್ವರಿ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next