Advertisement

ತುಮಕೂರು ಸಿದ್ಧಗಂಗಾ ಮಠಕ್ಕೆ ಗೃಹ ಸಚಿವ ಅರಗ ಜ್ಞಾನೇಂದ್ರ ಭೇಟಿ

10:07 PM Aug 08, 2021 | Team Udayavani |

ತುಮಕೂರು : ನಗರದ ಪ್ರಸಿದ್ಧ ಸಿದ್ಧಗಂಗಾ ಮಠಕ್ಕೆ ನೂತನ ಗೃಹ ಸಚಿವ ಅರಗ ಜ್ಞಾನೇಂದ್ರ ಭೇಟಿ ನೀಡಿ ಮಠದ ಹಿರಿಯ ಶ್ರೀಗಳಾದ ಲಿಂ.ಡಾ.ಶ್ರೀ ಶಿವಕುಮಾರ ಸ್ವಾಮೀಜಿಯ ಗದ್ದುಗೆಗೆ ಪೂಜೆ ಸಲ್ಲಿಸಿ ನಮಸ್ಕರಿಸಿ ಪ್ರಾರ್ಥನೆ ಸಲ್ಲಿಸಿದರು.

Advertisement

ನಂತರ ಮಾತನಾಡಿದ ಅವರು ನಾಳೆ ಗೃಹ ಇಲಾಖೆ ಅಧಿಕಾರಗಳ ಜೊತೆ ‌ಮೊದಲ ಸಭೆ ನಡೆಸಲಿದ್ದೇನೆ. ಆ ಮೂಲಕ ಅಧಿಕೃತವಾಗಿ ಚಾರ್ಜ್ ವಹಿಸಿಕೊಳ್ಳಲಿದ್ದೇನೆ.ಅದಕ್ಕೂ ಮುಂಚೆ ಸಿದ್ದಗಂಗಾ ಮಠಕ್ಕೆ ಬಂದು ಆಶೀರ್ವಾದ ಪಡೆದಿದ್ದೇನೆ. ಸಂಘಟನೆಯಲ್ಲಿದ್ದ ನನಗೆ ಯಡಿಯೂರಪ್ಪ ಹಾಗೂ ಸಿಎಂ ಬೊಮ್ಮಾಯಿ ಸೇರಿ ದೊಡ್ಡ ಜವಾಬ್ದಾರಿ ಕೊಟ್ಟಿದ್ದಾರೆ. ಪೊಲೀಸ್ ಇಲಾಖೆ ಸಶಕ್ತವಾಗಿ ಕೆಲಸ ಮಾಡುವ ಹಾಗೆ ಶಕ್ತಿ ತುಂಬಬೇಕು ಎಂದು ಯೋಚನೆ ಮಾಡಿದ್ದೇನೆ.

ಅಧಿಕಾರಿಗಳ ಜೊತೆ ಚರ್ಚೆ ಮಾಡಿ ಇಲಾಖೆಯಲ್ಲಿ ಇಷ್ಟು ವರ್ಷ ತರಲಾಗದೇ ಇದ್ದ ಏನಾದರೊಂದು ಬದಲಾವಣೆ ತರಲು ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದರು.

ಇದನ್ನೂ ಓದಿ:ವೈದ್ಯ ಶಿಕ್ಷಣದಲ್ಲಿ ಆರ್ಥಿಕ ದುರ್ಬಲರಿಗೆ 10% ಮೀಸಲು, ರಾಜ್ಯದಲ್ಲೂ ಜಾರಿಗೆ ನಿರ್ಧಾರ

ಔರಾದ್ಕರ್ ವರದಿ ಅಧ್ಯಯನ ಮಾಡಿ ಪೊಲೀಸರಿಗೆ ಅನುಕೂಲ ಮಾಡಿಕೊಡಲಾಗುವುದು ಖಾತೆ ಹಂಚಿಕೆಯಲ್ಲಿ ಅಸಮಾಧಾನ ಸಹಜ. ಎಲ್ಲಾ ಸರ್ಕಾರದಲ್ಲಿ ಅದು ಸಹಜ ಸಿಎಂ ಬೊಮ್ಮಯಿ ಚಾಣಾಕ್ಷರಿದ್ದಾರೆ ಅವರು ಈ ಗೊಂದಲವನ್ನು ನಿಭಾಯಿಸುತ್ತಾರೆ ಎಂದು ಹೇಳಿದರು.

Advertisement

ನಾನೂ ಕೂಡ ಯಾವುದೇ ಖಾತೆ ಬೇಕಂತ ಬೇಡಿಕೆ ಇಟ್ಟಿರಲಿಲ್ಲ. ನನ್ನ ಮೇಲೆ ಭರವಸೆ ಇಟ್ಟು ಹಿರಿಯವರು ಗೃಹ ಖಾತೆ ಕೊಟ್ಟಿದ್ದಾರೆ ಎಂದು
ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next