ಮಂಗಳೂರು: ಕುಕ್ಕರ್ ಬಾಂಬ್ ಬ್ಲಾಸ್ಟ್ ಘಟನೆ ಹಿನ್ನೆಲೆ ಗೃಹ ಸಚಿವ ಆರಗ ಜ್ಞಾನೇಂದ್ರ ಬುಧವಾರ ಮಂಗಳೂರಿಗೆ ಭೇಟಿ ನೀಡಿದರು.
Advertisement
ಈ ವೇಳೆ ಘಟನಾ ಸ್ಥಳಕ್ಕೆ ಡಿಜಿಪಿ ಪ್ರವೀಣ್ ಸೂದ್ ಅವರೊಂದಿಗೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡರು. ಬಳಿಕ ಆಸ್ಟತೆಗೆ ಭೇಟಿ ನೀಡಿ ರಿಕ್ಷಾ ಚಾಲಕ ಪುರುಷೋತ್ತಮ್ ಪೂಜಾರಿ ಅವರ ಆರೋಗ್ಯ ವಿಚಾರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್., ಶಾಸಕ ಭರತ್ ಶೆಟ್ಟಿ, ವೇದವ್ಯಾಸ್ ಕಾಮತ್, ಪೊಲೀಸ್ ಆಯುಕ್ತ ಶಶಿಕುಮಾರ್ ಮತ್ತಿತರರಿದ್ದರು.