Advertisement

ಅಡಿಕೆ ಬೆಳೆಯ ಎಲೆ ಚುಕ್ಕೆ ರೋಗ ಬಾಧೆ: ಕೇಂದ್ರದ ಗಮನ ಸೆಳೆಯಲು ನಿಯೋಗ; ಆರಗ ಜ್ಞಾನೇಂದ್ರ

06:54 PM Oct 18, 2022 | Team Udayavani |

ಬೆಂಗಳೂರು: ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕರಾವಳಿ ಭಾಗದಲ್ಲಿ ರೈತ ಸಮುದಾಯದ ಜೀವನಾಡಿಯದ, ಅಡಿಕೆ ಬೆಳೆಎಲೆ ಚುಕ್ಕೆ ರೋಗದಿಂದ ನಲುಗಿದ್ದು, ನಿಯಂತ್ರಣ ಬಗ್ಗೆ ಕೇಂದ್ರ ಸರಕಾರದ ಗಮನ ಸೆಳೆಯಲು, ನಾಳೆ ದೆಹಲಿಗೆ ನಿಯೋಗವೊಂದನ್ನು, ಕೊಂಡೊಯ್ಯಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

Advertisement

ಸುದ್ದಿಗಾರರೊಂದಿಗೆ, ಮಾತನಾಡಿದ ಸಚಿವರು, ಎಲೆ ಚುಕ್ಕೆ ರೋಗವು, ಇಡೀ ಮಲೆನಾಡು ಭಾಗದ ಅಡಿಕೆ ತೋಟಗಳಲ್ಲಿ ವ್ಯಾಪಕವಾಗಿ ಹಬ್ಬಿದ್ದು, ಅಡಿಕೆ ಬೆಳೆ ಸಂಪೂರ್ಣವಾಗಿ ನಾಶವಾಗುವ ಅಪಾಯಕ್ಕೆ ತುತ್ತಾಗಿದೆ.

ಅಡಿಕೆ ಬೆಳೆಯನ್ನು ಉಳಿಸಿ, ಬೆಳೆಗಾರರ ರಕ್ಷಣೆಗೆ ಬರಬೇಕಾದ ತುರ್ತು ಅಗತ್ಯವಿದ್ದು, ತಕ್ಷಣ ಪರಿಹಾರ ಕಂಡು ಕೊಳ್ಳುವ ನಿಟ್ಟಿನಲ್ಲಿ, ಕೇಂದ್ರ ಕೃಷಿ ಸಚಿವ ಶ್ರೀ ನರೇಂದ್ರ ಸಿಂಗ್ ತೋಮರ್ ಹಾಗೂ ಇತರರನ್ನು ಭೇಟಿಯಾಗಿ, ಚರ್ಚಿಸಲಾಗುವುದು, ಎಂದು ತಿಳಿಸಿದರು.

ಇದನ್ನೂ ಓದಿ:  ಬಾತ್‌ ರೂಮ್‌ ನಲ್ಲಿ ಬಳಸುವ 100 ರೂ. ಚಪ್ಪಲಿಗೆ 8,990 ರೂ ಬೆಲೆ: ನೆಟ್ಟಿಗರಿಂದ ಟ್ರೋಲ್

ಎಲೆ ಚುಕ್ಕೆ ರೋಗದ ನಿಯಂತ್ರಣ ಬಗ್ಗೆ, ಸಂಶೋಧನೆ, ರೈತರಿಗೆ ಪರಿಹಾರ ಹಾಗೂ ಇತರ ಮಾರ್ಗೋಪಾಯಗಳನ್ನು ಕಂಡುಕೊಳ್ಳುವ ಬಗ್ಗೆಯೂ, ಚರ್ಚಿಸಲಾಗುವುದು, ಎಂದು ಸಚಿವರು ತಿಳಿಸಿದರು.

Advertisement

ಸಂಸದ ಶ್ರೀ ರಾಘವೇಂದ್ರ, ಶಾಸಕರಾದ ಶ್ರೀ ಹರತಾಳು ಹಾಲಪ್ಪ ಹಾಗೂ ಇತರ ಗಣ್ಯರು, ರೋಗ ಪೀಡಿತ ಅಡಿಕೆ ತೋಟಗಳಿಗೆ, ತೀರ್ಥಹಳ್ಳಿ, ಸಾಗರ ಹಾಗೂ ಹೊಸನಗರ ತಾಲೂಕಿನಲ್ಲಿ, ಭೇಟಿ ನೀಡಿ, ರೈತರು, ಸಂಶೋಧನಾ ಕೇಂದ್ರದ ವಿಜ್ಞಾನಿಗಳು ಹಾಗೂ ಇತರ ರರ ಜತೆ, ಸಮಾಲೋಚನೆ, ಸಂವಾದ ನಡೆಸಿದ್ದೇವೆ, ಎಂದೂ ಸಚಿವರು ಹೇಳಿದರು.

ಶಿವಮೊಗ್ಗ ಸಂಸದ ಶ್ರೀ ಬಿ ವಯ್ ರಾಘವೇಂದ್ರ, ಸಾಗರ ಶಾಸಕ ಶ್ರಿ ಹರತಾಳು ಹಾಲಪ್ಪ, ಸೊರಬ ಮಂಜಪ್ಪ ನವರು ಹಾಗೂ ಇತರರು ನಿಯೋಗದಲ್ಲಿ ಭಾಗವಹಿಸುತ್ತಾರೆ, ಎಂದೂ ಹೇಳಿದರು.

 

Advertisement

Udayavani is now on Telegram. Click here to join our channel and stay updated with the latest news.

Next