ಶಿವಮೊಗ್ಗ: ನೆರೆಯ ಮಹಾರಾಷ್ಟ್ರ ಗಡಿ ಭಾಗದ ಜಿಲ್ಲೆಗಳಲ್ಲಿ ಶಾಂತಿ ಸೌಹಾರ್ದತೆ ಕಾಪಾಡಿ ಕೊಂಡು ಬರಲು, ಕಟ್ಟೆಚ್ಚರ ವಹಿಸುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಇಂದು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮಹಾರಾಷ್ಟ್ರದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸೊಂದಕ್ಕೆ ಕೆಲವು ಕಿಡಿಗೇಡಿಗಳು, ಕಲ್ಲು ತೂರಾಟ ನಡೆಸಿದ ಘಟನೆಯ ಹಿನ್ನೆಲೆಯಲ್ಲಿ ಸಚಿವರು ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಮಾತನಾಡಿ, ಶಾಂತಿ ಸೌಹಾರ್ದತೆ ಕಾಪಾಡಲು ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದರು.
ಕಲ್ಲು ತೂರಾಟ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಅಪರ ಮುಖ್ಯ ಕಾರ್ಯದರ್ಶಿ (ಒಳಾಡಳಿತ) ರಜನೀಶ್ ಗೋಯಲ್ ಅವರು, ಮಹಾರಾಷ್ಟ್ರ ರಾಜ್ಯ ಮುಖ್ಯ ಕಾರ್ಯದರ್ಶಿಯವರ ದೂರವಾಣಿ ಕರೆ ಮೂಲಕ ಸಂಪರ್ಕಿಸಿ, ಘಟನೆಯ ಬಗ್ಗೆ ಚರ್ಚಿಸಿದ್ದಾರೆ.
ಇದನ್ನೂ ಓದಿ:ಪಣಜಿ: ಪ್ರವಾಸೋದ್ಯಮ ಇಲಾಖೆ ಘೋಷಿಸಿದ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ
ಗಡಿ ಭಾಗದ ಜಿಲ್ಲೆಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ, ಮುನ್ನೆಚ್ಚರಿಕೆ ಕ್ರಮವಾಗಿ, ಎರಡೂ ರಾಜ್ಯಗಳ, ಹಿರಿಯ ಪೊಲೀಸ್ ಅಧಿಕಾರಿಗಳೂ ಸಭೆ ನಡೆಸಲಿದ್ದಾರೆ, ಎಂದೂ ಗೃಹ ಸಚಿವರು ಹೇಳಿದ್ದಾರೆ.