Advertisement
ಅವರು ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಉಗ್ರನಿಗೆ ಬೆಂಗಳೂರಿನಲ್ಲಿ ಆಶ್ರಯ ನೀಡಿದವರು ಯಾರು? ಆತನ ಬೆಂಬಲಕ್ಕೆ ಯಾರಿದ್ದಾರೆ? ಎಂಬುದರ ಬಗ್ಗೆ ರಾಜ್ಯ ಪೊಲೀಸರು ತನಿಖೆ ನಡೆಸಿದ್ದಾರೆ ಎಂದರು.
Related Articles
Advertisement
ಔರಾದ್ಕರ್ ವರದಿ ಜಾರಿಗೂ ಮೊದಲು ಪೊಲೀಸ್ ಸೇವೆಗೆ ಸೇರ್ಪಡೆಯಾಗಿರುವ ಪೊಲೀಸರಿಗೆ ಒಂದಿಷ್ಟು ಅನ್ಯಾಯವಾಗಿದೆ ಎಂದು ಹೇಳಲಾಗುತ್ತಿದೆ. ಈ ರೀತಿಯ ಸಮಸ್ಯೆ ಎಲ್ಲ ಇಲಾಖೆಗಳಲ್ಲಿಯೂ ಇದೆ. ಔರಾದ್ಕರ್ ವರದಿ ಶಿಫಾರಸು ಮಾಡುವ ವೇತನ, ಭತ್ಯೆಯನ್ನು ಹಿಂದಿನವರಿಗೂ ಕೊಟ್ಟರೆ ಸರ್ಕಾರದ ಬೊಕ್ಕಸಕ್ಕೆ ಸಾವಿರಾರು ಕೋಟಿ ಹೊರೆಯಾಗಲಿದೆ. ಆದ್ದರಿಂದ ಆರ್ಥಿಕ ಇಲಾಖೆಯೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಇದರ ಜತೆಗೆ 2006 ಮತ್ತು 2010 ರಲ್ಲಿ ಸೇವೆಗೆ ಸೇರಿದ ಸಿಬ್ಬಂದಿಗೆ ಒಂದೇ ವೇತನ ಶ್ರೇಣಿ ಇದ್ದು ಇದನ್ನು ಸರಿ ಪಡಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ಪಿಎಸ್‌ಐ ನೇಮಕಾತಿ ಪರೀಕ್ಷೆ ಒಂದೇ ಅಲ್ಲ ಅನೇಕ ನೇಮಕಾತಿ ಪರೀಕ್ಷೆಗಳಲ್ಲಿ ಈ ಹಿಂದಿನಿಂದಲೂ ಅಕ್ರಮ ನಡೆದುಕೊಂಡು ಬಂದಿದೆ. ಅಕ್ರಮದಲ್ಲಿ ಭಾಗಿಯಾದ ಯಾರನ್ನೂ ಬಿಡುವುದಿಲ್ಲ. ಪಾರದರ್ಶಕ ತನಿಖೆ ನಡೆಸಲಾಗುತ್ತಿದ್ದು ಪೊಲೀಸ್ ಉಪಾಧ್ಯಕ್ಷರು ಸೇರಿದಂತೆ ಹಲವರನ್ನು ಬಂಧಿಸಲಾಗಿದೆ.. ತಪ್ಪಿತಸ್ಥರಿಗೆ ತಕ್ಕ ಪಾಠ ಕಲಿಸುವ ಕೆಲಸ ಮಾಡಲಾಗುತ್ತಿದೆ. ಇನ್ನು ಮುಂದೆ ಇಂತಹ ಅಕ್ರಮಗಳಲ್ಲಿ ಭಾಗಿಯಾಗುವವರು ಒಮ್ಮೆ ಎದೆ ಮುಟ್ಟಿ ನೋಡಿಕೊಳ್ಳಬೇಕು. ಆ ರೀತಿಯಲ್ಲಿ ಇಲಾಖೆ ಕಠಿಣ ಕ್ರಮ ಇಲಾಖೆ ಕೈಗೊಂಡಿದೆ ಎಂದರು.
ಹಿಜಾಬ್ ಸೇರಿದಂತೆ ಅನೇಕ ವಿವಾದಗಳನ್ನು ಪೊಲೀಸರು ಉತ್ತಮವಾಗಿ ನಿಭಾಯಿಸಿದ್ದಾರೆ. ಹುಬ್ಬಳ್ಳಿ ಗಲಾಟೆಯನ್ನು ಎರಡೂವರೆ ಗಂಟೆಯಲ್ಲಿ ನಿಯಂತ್ರಿಸಲಾಗಿದೆ. ಮೈಸೂರಿನ ಅತ್ಯಾಚಾರ ಪ್ರಕರಣದ ಹಾಗೂ ಶಿವಮೊಗ್ಗದ ಕೊಲೆ ಪ್ರಕರಣದ ಆರೋಪಿಗಳನ್ನು ೪೮ ಗಂಟೆಗಳಲ್ಲಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಕರ್ನಾಟಕದಲ್ಲಿ ಉತ್ತಮ ಪೊಲೀಸ್ ವ್ಯವಸ್ಥೆ ಇದೆ. ಎಲ್ಲಿಯೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ಬಂದಿಲ್ಲ ಎಂದರು.
ಪೂರ್ವ ವಲಯ ಐಜಿಪಿ ತ್ಯಾಗರಾಜನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ಈ ಸಂದರ್ಭದಲ್ಲಿದ್ದರು.