Advertisement
ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣದ ಆರೋಪಿ ಶಾರೀಕ್ ಜಾಮೀನಿನ ಮೂಲಕ ಹೊರಬಂದ ಬಳಿಕ ತೀರ್ಥಹಳ್ಳಿಯ ಕೆಲವು ದಿನದವರೆಗೆ ಪೊಲೀಸ್ ಕಣ್ಣಿಟ್ಟಿದ್ದರು. ಆದರೆ ನಂತರ ತಪ್ಪಿಸಿಕೊಂಡಿದ್ದ. ಆತ ಬೇರೆ ರಾಜ್ಯಗಳಲ್ಲಿ ಸಂಚರಿಸಿದ್ದ ಎಂದರು.
Related Articles
Advertisement
ಆರೋಪಿ ಶಾರೀಕ್ ನ ಆರೋಗ್ಯ ಸುಧಾರಣೆಗೆ ಹೆಚ್ಚಿನ ಗಮನ ನೀಡುವ ಬಗ್ಗೆ ವೈದ್ಯರೊಂದಿಗೆ ಮಾತನಾಡಿದ್ದೇನೆ. ಎಂಟು ಮಂದಿ ತಜ್ಞ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಆತ ಗುಣಮುಖನಾದ ಮೇಲೆ ಹೆಚ್ಚಿನ ವಿಚಾರಣೆ ನಡೆಯಲಿದೆ ಎಂದರು.
ಗಾಯಾಳು ರಿಕ್ಷಾ ಚಾಲಕರ ಚಿಕಿತ್ಸಾ ವೆಚ್ಚವನ್ನು ಸಂಪೂರ್ಣವಾಗಿ ಸರಕಾರವೇ ಭರಿಸಲಿದೆ. ಅವರ ಕುಟುಂಬಕ್ಕೆಆರ್ಥಿಕ ಸಹಾಯ ಕೂಡ ಸರಕಾರದಿಂದ ಒದಗಿಸುವ ಬಗ್ಗೆ ಬೆಂಗಳೂರಿಗೆ ತೆರಳಿದ ಮೇಲೆ ನಿರ್ಣಯ ತೆಗೆದುಕೊಳ್ಳುತ್ತೇವೆ ಎಂದರು.
ಭಯಾನಕ ಘಟನೆಯೊಂದು ತಪ್ಪಿದೆ. ಭಯೋತ್ಪಾದನಾ ಕೃತ್ಯ ನಿರ್ಮೂಲನೆಗೆ ಕೇಂದ್ರ ರಾಜ್ಯ ಸರಕಾರಗಳು ಗಮನ ಹರಿಸಿದೆ. ಇತ್ತೀಚಿನ ವರ್ಷಗಳಲ್ಲಿ ಇಂತಹ ಕೃತ್ಯಗಳು ಕಡಿಮೆಯಾಗಿವೆ ಎಂದು ಗೃಹ ಸಚಿವರು ಹೇಳಿದರು.
ಶಿಘ್ರದಲ್ಲಿ ಎನ್ಐಎಗೆ
ಆರೋಪಿಗಳ ಹಣದ ಮೂಲದ ಬಗ್ಗೆ ತನಿಖೆ ನಡೆಯುತ್ತಿದೆ. ಅದನ್ನು ತನಿಖೆ ಮಾಡುತ್ತಿದ್ದೇವೆ. ಆದರೆ ಈಗ ಅದನ್ನು ಬಹಿರಂಗ ಪಡಿಸಲು ಸಾಧ್ಯವಿಲ್ಲ. ಸದ್ಯ ಆರೋಪಿಯ ಪ್ರಾಣ ಉಳಿಸಬೇಕು, ಅದು ನಮಗೆ ಅತೀ ಅಗತ್ಯ. ಅವನ ವಿಚಾರಣೆ ಬಳಿಕ ಮತ್ತಷ್ಟು ಸತ್ಯ ಹೊರಗೆ ಬರುತ್ತದೆ ಎಂದು ಡಿಜಿಪಿ ಪ್ರವೀಣ್ ಸೂದ್ ಹೇಳಿದರು.
ಎನ್ಐಎ ಮತ್ತು ಕೇಂದ್ರದ ತನಿಖಾ ಸಂಸ್ಥೆಗಳು ನಮ್ಮ ಜೊತೆ ಇದೆ. ಅಧಿಕೃತವಾಗಿ ಸದ್ಯದಲ್ಲೇ ಈ ಪ್ರಕರಣ ಎನ್ ಐಎಗೆ ಹಸ್ತಾಂತರವಾಗಲಿದೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಲೆಟರ್ ಕೂಡ ಕೊಡಲಾಗಿದೆ ಎಂದರು.
ತಮಿಳುನಾಡು, ಕೇರಳ ಎಲ್ಲಾ ಕಡೆಗಳಲ್ಲೂ ನಮ್ಮ ತನಿಖೆಯಾಗುತ್ತಿದೆ. ನಮ್ಮ ಪೊಲೀಸರು ಕೂಡ ಈ ಬಗ್ಗೆ ವಿಚಾರಣೆ ಮುಂದುವರೆಸ್ತಾರೆ. ನಾವು ಹಲವು ಜನರನ್ನ ವಶಕ್ಕೆ ಪಡೆಯುತ್ತೇವೆ, ಆದರೆ ಅವರು ಆರೋಪಿಗಳೇ ಆಗಿರಲ್ಲ. ಅವರನ್ನು ನಾವು ಬಂಧಿಸುತ್ತಿಲ್ಲ, ವಿಚಾರಣೆಗೆ ಕರೆ ತರುತ್ತೇವೆ ಅಷ್ಟೇ. ಬೆಂಗಳೂರು ಸೇರಿ ಎಂಟು ಕಡೆ ದಾಳಿ ನಡೆಸಿ ನಾಲ್ಕು ಜನರನ್ನ ವಶಕ್ಕೆ ಪಡೆದಿದ್ದೇವೆ ಅಷ್ಟೇ. ಆರೋಪಿಗಳು ಅಂತ ಯಾರನ್ನೂ ನಾವು ವಶಕ್ಕೆ ಪಡೆದಿಲ್ಲ. ನಾವು ಎಲ್ಲಾ ರೀತಿಯಿಂದ ತನಿಖೆ ಮಾಡುತ್ತಿದ್ದೇವೆ ಎಂದರು.