Advertisement

ನ್ಯಾ. ಮೋಹನ್ ಶಾಂತನಗೌಡರ್ ನಿಧನಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸಂತಾಪ

03:32 PM Apr 25, 2021 | Team Udayavani |

ಬೆಂಗಳೂರು : ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಮೋಹನ್ ಎಂ ಶಾಂತನಗೌಡರ್ ನಿಧನಕ್ಕೆ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Advertisement

ನ್ಯಾಯಾಂಗ ಕ್ಷೇತ್ರದಲ್ಲಿ ಉನ್ನತ ಹುದ್ದೆಗೇರಿದ ಶಾಂತನಗೌಡರ್ ಅವರ ನಿಧನದಿಂದ ನ್ಯಾಯಾಂಗ ಕ್ಷೇತ್ರಕ್ಕೆ ತುಂಬಲಾದರ ನಷ್ಟವಾಗಿದೆ. ಅವರ ನಿಧನದ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ ನೀಡಲಿ ಎಂದು  ಆ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಬೊಮ್ಮಾಯಿ ಕಂಬನಿ ಮಿಡಿದಿದ್ದಾರೆ.

ಇದನ್ನೂ ಓದಿ:ಕೆ.ಸಿ ಜನರಲ್ ಆಸ್ಪತ್ರೆಯ ಕೋವಿಡ್ ವಾರ್ಡ್ ಗೆ ತೆರಳಿ ಸೋಂಕಿತರ ಯೋಗಕ್ಷೇಮ ವಿಚಾರಿಸಿದ ಡಿಸಿಎಂ

ಸಚಿವರು ಬೆಂಗಳೂರಿನ ರಾಜಾಜಿನಗರದಲ್ಲಿರುವ  ಶಾಂತನಗೌಡರ ನಿವಾಸದಲ್ಲಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ವಸತಿ ಸಚಿವ ವಿ.  ಸೋಮಣ್ಣ, ಕೃಷಿ ಸಚಿವ ಬಿಸಿ ಪಾಟೀಲ್ ಅವರು ಮೋಹನ ಶಾಂತನಗೌಡರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.

ಸಕಲ ಸರ್ಕಾರಿ ಗೌರವಗಳೊಂದಿಗೆ ಶಾಂತನಗೌಡರ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.

Advertisement
Advertisement

Udayavani is now on Telegram. Click here to join our channel and stay updated with the latest news.

Next