ಬೆಂಗಳೂರು: ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೂ ಕೋವಿಡ್ ಸೋಂಕು ತಗುಲಿದ್ದು ಈ ಕುರಿತು ಸ್ವತಃ ಅವರೇ ಟ್ವೀಟ್ ಮಾಡಿ ತಿಳಿಸಿದ್ದಾರೆ.
“ನನ್ನ ಮನೆಯಲ್ಲಿ ಕಾರ್ಯ ನಿರ್ವಹಿಸುವ ಕೆಲಸದ ಹುಡುಗನಿಗೆ ನಿನ್ನೆ ಕೋವಿಡ್ ಪರೀಕ್ಷೆಯಿಂದ ಸೊಂಕು ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ನಾನೂ ಕೂಡ ಪರೀಕ್ಷೆಗೆ ಒಳಪಟ್ಟಿರುತ್ತೇನೆ. ನನಗೂ ಕೂಡ ಸೋಂಕು ದೃಢಪಟ್ಟಿದ್ದು, ಯಾವುದೇ ರೀತಿಯ ರೋಗ ಲಕ್ಷಣ ಕಂಡುಬಂದಿಲ್ಲ. ಮತ್ತು ಆರೋಗ್ಯವಾಗಿದ್ದೇನೆ. ಹಾಗೂ ಹೋ ಕ್ವಾರಂಟೈನ್ ಗೆ ಒಳಪಡುತ್ತಿದ್ದೇನೆ ಎಂದಿದ್ದಾರೆ.
ಇತ್ತೀಚಿಗೆ ನನ್ನ ನೇರ ಸಂಪರ್ಕಕ್ಕೆ ಬಂದಿರುವವರು ಕೂಡಲೇ ಪರೀಕ್ಷೆಗೆ ಒಳಪಡುವಂತೆ ಹಾಗೂ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ದೇಶದಲ್ಲಿ 50 ಲಕ್ಷ ದಾಟಿದ ಸೊಂಕಿತರ ಸಂಖ್ಯೆ: ಒಂದೇ ದಿನದಲ್ಲಿ 1,290 ಜನರು ಬಲಿ
ದೇಶದಲ್ಲಿ ಕೋವಿಡ್ ಸೊಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 901,123 ಹೊಸ ಪ್ರಕರಣಗಳು ಪತ್ತೆಯಾಗುವುದರೊಂದಿಗೆ ವೈರಾಣು ಪೀಡಿತರ ಸಂಖ್ಯೆ 50 ಲಕ್ಷದ ಗಡಿ ದಾಟಿದೆ.