ದಾವಣಗೆರೆ: ಶಾಸಕ ಪಿ.ಟಿ. ಪರಮೇಶ್ವರನಾಯ್ಕ ಅವರ ಮಗನ ಮದುವೆಯಲ್ಲಿ ಏನು ನಡೆದಿದೆ ಎಂಬುದನ್ನು ನಾನು ನೋಡಿಲ್ಲ. ಬಳ್ಳಾರಿ ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ ಗಮನಿಸಿರುತ್ತಾರೆ. ಸೂಕ್ತ ಕ್ರಮ ತೆಗೆದುಕೊಳ್ಳುತ್ತಾರೆ. ಕಾನೂನು ಎಲ್ಲರಿಗೂ ಒಂದೇ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಹಿನ್ನೆಲೆಯಲ್ಲಿ ಮದುವೆ ಮಾಡುವ ಬಗ್ಗೆ ಕಾನೂನು, ಮಾರ್ಗಸೂಚಿ ಮಾಡಲಾಗಿದೆ ಎಂದರು.
ಬಿಜೆಪಿ ಸರ್ಕಾರ ರೈತರ ಹಿತ ಕಾಪಾಡುವ ನಿಟ್ಟಿನಲ್ಲಿ ಬದ್ದ. ಭೂ ಸುಧಾರಣಾ ಕಾಯ್ದೆಯಡಿ ಭೂ ಖರೀದಿಗೆ ಅವಕಾಶ ಇದೆ. 79 ಎ ಮತ್ತು ಬಿ ಅನ್ವಯ ಭೂ ಖರೀದಿಗೆ ಅವಕಾಶ ಇದ್ದಾಗ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ ನಡೆದಿತ್ತು. ನಮ್ಮ ಸರ್ಕಾರ ರೈತರ ಹಿತ ಕಾಯಲು ಬದ್ದ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ನಡೆಯುತ್ತಿದೆ. ರಾಘವೇಂದ್ರ ಔರಾದ್ಕರ್ ವರದಿ ಜಾರಿಯಾಗಿದೆ. ಪೊಲೀಸರ ಮೂಲ ವೇತನ ಹೆಚ್ಚಿಸಲಾಗಿದೆ ಎಂದು ತಿಳಿಸಿದರು.
ಪಿ.ಟಿ.ಪರಮೇಶ್ವರನಾಯಕ್ ಮೇಲೆ ಪ್ರಕರಣ ದಾಖಲು: ಹರಪನಹಳ್ಳಿ ತಾಲೂಕಿನ ಲಕ್ಷ್ಮಿಪುರದಲ್ಲಿ ಹಡಗಲಿ ಶಾಸಕ ಪಿ.ಟಿ. ಪರಮೇಶ್ವರ ನಾಯಕ್ ಅವರ ಪುತ್ರನ ಮದುವೆಯಲ್ಲಿ ಕೋವಿಡ್ ಎಸ್ಒಪಿ ನಿಯಮಗಳ ಉಲ್ಲಂಘನೆ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ. 50ಕ್ಕಿಂತ ಹೆಚ್ಚು ಜನರು ಮದುವೆಯಲ್ಲಿ ಪಾಲ್ಗೊಳ್ಳಬಾರದು ಎಂಬ ಎಸ್ಒಪಿ ನಿಯಮಾವಳಿಯನ್ನು ಈ ಆರತಕ್ಷತಾ ಕಾರ್ಯಕ್ರಮದಲ್ಲಿ ಉಲ್ಲಂಘಿಸಲಾಗಿದೆ