Advertisement

ರಾಮನಗರದ ಜನ ಹೆದರಬೇಕಿಲ್ಲ, ಆತಂಕ ಪಡಬೇಕಿಲ್ಲ: ಗೃಹ ಸಚಿವ ಬೊಮ್ಮಾಯಿ ಅಭಯ

08:11 AM Apr 25, 2020 | keerthan |

ಬೆಂಗಳೂರು: ಪಾದರಾಯನಪುರ ಪ್ರಕರಣದಲ್ಲಿ ರಾಮನಗರ ಜೈಲಿಗೆ ಕಳುಹಿಸಿದ್ದ ಆರೋಪಿಗಳಲ್ಲಿ ಮೂವರಿಗೆ ಕೋವಿಡ್-19 ಸೋಂಕು ಕಂಡುಬಂದ ಹಿನ್ನಲೆಯಲ್ಲಿ, ರಾಮನಗರದ ಜನ ಹೆದರಬೇಕಿಲ್ಲ, ಆತಂಕ ಪಡಬೇಕಿಲ್ಲ. ರಾಮನಗರದ ಜೈಲಿನಲ್ಲಿರುವ ಎಲ್ಲರನ್ನೂ ಪರೀಕ್ಷೆ ಮಾಡುತ್ತೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Advertisement

ಈ ಬಗ್ಗೆ ಮಾತನಾಡಿದ ಅವರು, ರಾಮನಗರ ಜಿಲ್ಲೆಯ ಜನರು ಭಯ ಪಡುವ ಅಗತ್ಯತೆ ಇಲ್ಲ. ಈಗಾಗಲೇ ಆ ಕೈದಿಗಳನ್ನು ಸ್ಥಳಾಂತರ ಮಾಡಲಾಗ್ತಿದೆ. ಅವರಿಂದ ಸೋಂಕು ಹರಡದಂತೆ ಕ್ರಮ ವಹಿಸಲಾಗಿದೆ. ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮ ವಹಿಸಲಾಗಿದೆ. ಹೀಗಾಗಿ ಯಾರು ಭಯ ಪಡಬೇಡಿ ಎಂದು ರಾಮನಗರ ಜಿಲ್ಲೆಯ ಜನರಿಗೆ ಗೃಹ ಸಚಿವ ಬೊಮ್ಮಾಯಿ ಅಭಯ ನೀಡಿದರು.

ರಾಮನಗರಕ್ಕೆ ಆರೋಪಗಳನ್ನು ಸ್ಥಳಾಂತರ ಮಾಡಿದ್ದರಲ್ಲಿ ತಪ್ಪಾಗಿಲ್ಲ. ಯಾರದ್ದೂ ತಪ್ಪಿಲ್ಲ, ಕೋವಿಡ್-19 ಹೋರಾಟದಲ್ಲಿ ಬೇರೆ ಬೇರೆ ಆಯಾಮಗಳು ಬರುತ್ತಿರುತ್ತದೆ. ಸಂದರ್ಭಕ್ಕೆ ತಕ್ಕಂತೆ ಸರ್ಕಾರ ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ಪಾದರಾಯನಪುರ ಆರೋಪಿಗಳನ್ನು ಬೆಂಗಳೂರಿನ‌ ಹಜ್ ಭವನಕ್ಕೆ ಶಿಫ್ಟ್ ಮಾಡ್ತೇವೆ. ಇದಕ್ಕಾಗಿ ಎಲ್ಲ ಅಗತ್ಯ ತಯಾರಿ ಮಾಡಿಕೊಳ್ತಿದ್ದೇವೆ. ಜೈಲು ಸಿಬ್ಬಂದಿಗೂ ಪರೀಕ್ಷೆ ಮಾಡಿ ಕ್ವಾರಂಟೈನ್ ಮಾಡುತ್ತೇವೆ. ಇಲ್ಲೂ ಪೊಲೀಸರಿಗೆ ತಪಾಸಣೆ ಮಾಡಿ ಅಗತ್ಯವಿದ್ದರೆ ಕ್ವಾರಂಟೈನ್ ಮಾಡ್ತೇವೆ ಎಂದರು.

ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಅವರು, ಯಾರು ಸಲಹೆ ಕೊಡ್ತಾರೆ ಅನ್ನೋದು‌ ಮುಖ್ಯ ಅಲ್ಲ. ಆವತ್ತಿನ‌ ಸಂದರ್ಭದಲ್ಲಿ ಆರೋಪಿಗಳನ್ನು ಜೈಲಲ್ಲಿ ಇಡುವುದು ಉಚಿತವಾಗಿತ್ತು. ಏನೇ ಮಾಡಿದರೂ ಆಪಾದನೆ ಬಂದೇ ಬರುತ್ತದೆ. ಆರೋಪಿಗಳನ್ನು ಜೈಲಿನ ಬದಲು ಆಸ್ಪತ್ರೆಯಲ್ಲಿ ಇಡುತ್ತಿದ್ದರೂ ಟೀಕೆ ಬರುತ್ತಿತ್ತು. ಹೀಗೇ ಮಾಡಬೇಕು ಹಾಗೇ ಮಾಡಬೇಕು ಅಂತ ನೋಡುವ ಕಾಲ ಅಲ್ಲ ಇದು, ಸಂದರ್ಭ, ಸಮಯ‌ ನೋಡಿಕೊಂಡು ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ರಾಮನಗರದ ಜೈಲಿನಲ್ಲಿ ಆರೋಪಿಗಳಿಗೆ ಸೋಂಕು ಕಂಡು ಬಂದರೆ ಶಿಫ್ಟ್ ಮಾಡುತ್ತೇವೆ ಅಂತ ಮೊದಲೇ ನಾವು ಹೇಳಿದ್ದವೆವು, ಇದನ್ನು ಕುಮಾರಸ್ವಾಮಿ ಅವರಿಗೂ ಹೇಳಿದ್ದೆವು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next