ಬೆಂಗಳೂರು: ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಹಲವಾರು ಹಿನ್ನೆಲೆಗಳಿವೆ. ಪೊಲೀಸ್ ತನಿಖೆಯಲ್ಲಿ ಸಾಕಷ್ಟು ವಿಚಾರಗಳು ಹೊರಗೆ ಬರುತ್ತಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೇಖಾ ಕದಿರೇಶ್ ಕೊಲೆಗೆ ಹಲವಾರು ಹಿನ್ನೆಲೆಗಳಿವೆ. ಅವರ ಯಜಮಾನರ ಈ ಹಿಂದೆ ಕೊಲೆಯಾಗಿತ್ತು. ಈಗ ತನಿಖೆಯಲ್ಲಿ ಸಾಕಷ್ಟು ವಿಷಯ ಬರುತ್ತಿದ್ದಾವೆ ಎಂದು ಹೇಳಿದರು.
ಇದನ್ನೂ ಓದಿ:ಹುಟ್ಟುಹಬ್ಬದ ದಿನವೇ ವಿಷ ಸೇವಿಸಿ ಯುವಕ ಆತ್ಮಹತ್ಯೆ: ಈ ಹಿಂದೆ ಎರಡು ಬಾರಿ ಪ್ರಯತ್ನ ಮಾಡಿದ್ದ!
ಆರೋಪಿಗಳನ್ನು ಬಂಧಿಸಲಾಗುತ್ತದೆ. ಸತ್ಯ ಆದಷ್ಟು ಬೇಗ ಹೊರಬರುತ್ತದೆ. ಅದೂ ಹಾಡಹಗಲೆ ಕೊಲೆಯಾಗಿದ್ದರಿಂದ ಪೊಲೀಸರು ತನಿಖೆ ಮಾಡುವಾಗ ಹಲವು ವಿಚಾರ ಗೊತ್ತಾಗಿದೆ. ರಾಜಕೀಯ ಕಾರಣವೋ ಕೌಟುಂಬಿಕ ಕಾರಣವೋ ಎಂಬುದು ತನಿಖೆಯಲ್ಲಿ ಸ್ಪಷ್ಟವಾಗುತ್ತದೆ ಎಂದು ಬೊಮ್ಮಾಯಿ ಹೇಳಿದರು.
ಗುರುವಾರ ಬೆಳಗ್ಗೆ 10.10ರ ಸುಮಾರಿಗೆ ಮನೆಯಿಂದ ಸುಮಾರು ನೂರು ಮೀಟರ್ ದೂರದಲ್ಲಿರುವ ಕಚೇರಿಯಲ್ಲಿ ರೇಖಾ ಅವರು ಎಂದಿನಂತೆ ಬಡವರಿಗೆ ಊಟ ವಿತರಿಸಿ ಮನೆಗೆ ಹಿಂದಿರುಗುತ್ತಿದ್ದರು. ಆ ವೇಳೆ ಬೈಕ್‌ನಲ್ಲಿ ಬಂದ ಇಬ್ಬರು ಆಗಂತುಕರು ರೇಖಾ ಅವರ ಹೊಟ್ಟೆ ಸೇರಿ ದೇಹದ ವಿವಿಧೆಡೆ15ಕ್ಕೂ ಅಧಿಕ ಬಾರಿ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆಗೈದಿದ್ದಾರೆ.