Advertisement

ಹೆದ್ದಾರಿ ಪ್ರಾಧಿಕಾರ ಕೇಂದ್ರ ಸರಕಾರದ ನಿಯಂತ್ರಣದಲ್ಲಿದೆ: ಗೃಹ ಸಚಿವ ಡಾ.ಜಿ. ಪರಮೇಶ್ವರ್

11:57 AM Jul 01, 2023 | Team Udayavani |

ಮೈಸೂರು: ಬೆಂಗಳೂರು – ಮೈಸೂರು ಹೈವೆಯಲ್ಲಿ ಸುಗಮ – ಸುರಕ್ಷಿತ ಸಂಚಾರಕ್ಕೆ ಯಾವುದೇ ಕ್ರಮವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತೆಗೆದು ಕೊಂಡಿಲ್ಲ. ಹೈವೆಯಲ್ಲಿ ಸಂಚಾರ ಸೂಚನ‌ ಫಲಕ ಯಾವುದು ಅಳವಡಿಕೆ ಆಗಿಲ್ಲ. ಬೇರೆ ಹೈವೆ ಗಳ ರೀತಿ ಇಲ್ಲಿ ವ್ಯವಸ್ಥಿತವಾಗಿ ಏನೂ ಮಾಡಿಲ್ಲ. ರಾಜ್ಯದ ಸಂಚಾರ ವಿಭಾಗದ ಎಡಿಜಿಪಿ ನನಗೆ ಈ ಬಗ್ಗೆ ಮೌಖಿಕವಾಗಿ ವರದಿ ಕೊಟ್ಟಿದ್ದಾರೆ. ಹೆದ್ದಾರಿಯಲ್ಲಿ ದರೋಡೆ ಕೂಡ ನಡೆಯುತ್ತಿವೆ. ಇದನ್ನು ತಡೆಯೋಕೆ ಕ್ರಮವಹಿಸಿದ್ದೇವೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದರು.

Advertisement

ಮೈಸೂರಿನಲ್ಲಿ ಮಾತನಾಡಿದ ಅವರು, ಹೆದ್ದಾರಿ ಪ್ರಾಧಿಕಾರಕ್ಕೆ ಟೋಲ್ ವಸೂಲಿ ಬೇಡ ಅಂತಾ ಸೂಚನೆ ಕೊಟ್ಟಿದ್ದೇವು.  ಆದರೂ ಟೋಲ್ ವಸೂಲಿ ಶುರು ಮಾಡಿದ್ದಾರೆ. ಹೆದ್ದಾರಿ ಪ್ರಾಧಿಕಾರ ಕೇಂದ್ರ ಸರಕಾರದ ನಿಯಂತ್ರಣದಲ್ಲಿದೆ. ಅವಸರವಾಗಿ ಹೆದ್ದಾರಿ ಉದ್ಘಾಟನೆ ಮಾಡಿದರು. ರಾಜಕೀಯ ಉದ್ದೇಶದಿಂದ ತರಾತುರಿಯಲ್ಲಿ ಉದ್ಘಾಟನೆ ಮಾಡಿದರು. ಹೀಗಾಗಿ ಇಷ್ಟೆಲ್ಲ ಸಮಸ್ಯೆ ಆಗುತ್ತಿದೆ. ಹೈವೆಯಲ್ಲಿ ಇಷ್ಟು ಬೇಗ ಅಷ್ಟು ಜನ ಸಾಯುತ್ತಾರೆ ಎಂದರೆ ಅದರ ಅರ್ಥ ಬಹಳ ಲೋಪವಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ಮೈ-ಬೆಂ ಹೆದ್ದಾರಿ 2ನೇ ಟೋಲ್ ಸಂಗ್ರಹ ಕೇಂದ್ರ ಸರ್ಕಾರದ ಉದ್ಧಟತನ: ಸಚಿವ ಎನ್.ಚಲುವರಾಯಸ್ವಾಮಿ

ಹೈವೆಯಲ್ಲಿ ಡ್ರಿಂಕ್ ಅಂಡ್ ಡ್ರೈವ್  ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಜನರಿಗೆ ತೊಂದರೆ ಆಗದಂತೆ ಜನರ ಸುರಕ್ಷತೆಗೆ ಬೇಕಾದ ಕ್ರಮ ಜರುಗಿಸುತ್ತೇವೆ ಎಂದರು.

ರಾಜ್ಯದ ವಿವಿಧ ಇಲಾಖೆಗಳಲ್ಲಿ 2.50 ಲಕ್ಷ ಹುದ್ದೆ ಖಾಲಿ ಇವೆ. ಅದನ್ನು ಭರ್ತಿ ಮಾಡುವ ಕಾರ್ಯ ಶುರುವಾಗಿದೆ. ಪೊಲೀಸ್ ಇಲಾಖೆಯಲ್ಲಿ 15 ಸಾವಿರ ಹುದ್ದೆ ಖಾಲಿ ಇದೆ. ಮೊದಲ ಹಂತದಲ್ಲಿ 4 ಸಾವಿರ ಪೊಲೀಸ್ ಪೇದೆ, 400 ಸಬ್ ಇನ್ಸ್ಪೆಕ್ಟರ್ ಹುದ್ದೆ ಭರ್ತಿ ಮಾಡುವುದಕ್ಕೆ ಮುಂದಾಗಿದ್ದೇವೆ ಎಂದರು.

Advertisement

ಸಬ್ ಇನ್ಸೆಪೆಕ್ಟರ್ ಹುದ್ದೆ ನೇಮಕಾತಿ ಅಕ್ರಮ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಅಕ್ರಮ ಕುರಿತ ವಿಚಾರಣೆಯಲ್ಲಿ ನ್ಯಾಯಾಲಯ ಸರಕಾರದ ಅಭಿಪ್ರಾಯ ಕೇಳಿದೆ. ನ್ಯಾಯಾಲಯಕ್ಕೆ ಜುಲೈ 5 ರಂದು ನಮ್ಮ‌ ಅಭಿಪ್ರಾಯ ಹೇಳುತ್ತೇವೆ. ಔರಾದಕರ್ ವರದಿ ಯಥಾವತ್ ಜಾರಿ ಕಷ್ಟ.  ಪೊಲೀಸರಿಗೆ ವಾರದ ರಜೆ ಕೊಡಬೇಕು. ಅದನ್ನು ಅನುಷ್ಠಾನ ಮಾಡುತ್ತೇನೆ. ರಾತ್ರಿ ಪಾಳಿ ಮಾಡಿದವರಿಗೆ ವಿಶೇಷ ಭತ್ಯೆ ಕೊಡುವ ವಿಚಾರದಲ್ಲೂ ಅದಷ್ಟು ಬೇಗ ತೀರ್ಮಾನ ತೆಗೆದುಕೊಳ್ಳುತ್ತೇವೆ.

ಎಪಿಎಂಸಿ ಕಾಯ್ದೆ ತಿದ್ದುಪಡಿ ವಾಪಸ್ ತೆಗೆದು ಕೊಳ್ಳುತ್ತೇವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next