Advertisement

ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್

09:54 AM Dec 24, 2024 | Team Udayavani |

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರಿಗೆ ಅಸಮರ್ಥ ಕೇಂದ್ರ ಸಚಿವ ಎಂದರೆ ಒಪ್ಪಿಕೊಳ್ತಾರಾ..? ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ. ಅದಕ್ಕೆ ಅವರು ಹಾಗೆ ಹೇಳಿದ್ದಾರೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ತಿರುಗೇಟು ನೀಡಿದರು. ‌

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮನ್ನ ಅಸಮರ್ಥ ಸಚಿವ ಎಂಬ ಕೇಂದ್ರ ಸಚಿವ ಜೋಶಿ ಅವರ ಹೇಳಿಕೆಗೆ ತಿರುಗೇಟು‌ ನೀಡಿದರು. ಸಿ.ಟಿ. ರವಿ ಪ್ರಕರಣವನ್ನು ಈಗಾಗಲೇ ಸಿಓಡಿ ತನಿಖೆಗೆ ಒಪ್ಪಿಸಲಾಗಿದೆ. ಹೀಗಾಗಿ ತನಿಖೆ ನಡೆಯುವ ಸಂದರ್ಭದಲ್ಲಿ ಅದ ಬಗ್ಗೆ ನಾನು ಹೆಚ್ಚು ಮಾತನಾಡುವುದು ಸರಿಯಲ್ಲ ಎಂದರು.

ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ ಎನ್ನುವ ಸಭಾಪತಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, ಅವರು ತಮ್ಮ ಕೆಲಸವನ್ನು ಮಾಡಿದ್ದಾರೆ. ಅಲ್ಲಿಯ ಸಾಧಕ‌ ಬಾಧಕಗಳನ್ನ ನೋಡಿಕೊಂಡು ಹೇಳಿಕೆ ಕೊಟ್ಟಿರಬಹುದು. ಪೊಲೀಸರು ಅವರ ಕರ್ತವ್ಯ ನಿರ್ವಹಿಸುತ್ತಾರೆ. ಕಾನೂನು ಪ್ರಕ್ರಿಯೆ ನಡೆಯುವಾಗ ಕೆಲವು ವಿಳಂಬವಾಗಬಹುದು. ಆದರೆ ಪ್ರಕರಣದ ಸತ್ಯಾಸತ್ಯತೆ ನೋಡಿ ತನಿಖೆ ಸರಿಯಾಗಿ ಮಾಡಬೇಕಾಗುತ್ತದೆ ಎಂದರು.

ಸಿ.ಟಿ.ರವಿ ಆ ರೀತಿ ಹೇಳಿಲ್ಲ ಎನ್ನುತ್ತಿದ್ದಾರೆ. ಆದರೆ ಸಚಿವೆ ಹೆಬ್ಬಾಳಕರ್ ಪಕ್ಕದಲ್ಲಿದ್ದವರು ಆ ಮಾತು ಆಡಿದ್ದಾರೆ ಅಂತ ಹೇಳುತ್ತಿದ್ದಾರೆ. ಈ ಎಲ್ಲ ವಿಚಾರಗಳ ಬಗ್ಗೆ ತನಿಖೆ ಆಗಲೆಂದೇ ಸಿಓಡಿಗೆ ಹಸ್ತಾಂತರ ಮಾಡಲಾಗಿದೆ.

ಪೊಲೀಸ್ ಇಲಾಖೆ ಅತ್ಯಂತ ಜವಬ್ದಾರಿ ಇಲಾಖೆಯಾಗಿದೆ. ಮುಖ್ಯಮಂತ್ರಿ ಅಥವಾ ಗೃಹ ಸಚಿವರ ಆದೇಶವನ್ನ ಮಾತ್ರ ಪೊಲೀಸರು ಪಾಲನೆ ಮಾಡುತ್ತಾರೆ. ಇತರರ ಹಸ್ತಕ್ಷೇಪ ಅಸಾಧ್ಯ. ಬೇರೆ ಯಾರೇ ಆದೇಶ ಮಾಡಿದರು ಅದನ್ನ ಪಾಲನೆ ಮಾಡುವುದಿಲ್ಲ. ಅವರಿವರು ಆರೋಪ ಮಾಡುತ್ತಾರೆ ಎಂದು ನಾವು ಇಲಾಖೆ ನಡೆಸುವುದಿಲ್ಲ. ಕಾನೂನು ಚೌಕಟ್ಟಿನಲ್ಲಿ ನಾವು ಕೆಲಸ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

Advertisement

ಇದನ್ನೂ ಓದಿ: Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

Advertisement

Udayavani is now on Telegram. Click here to join our channel and stay updated with the latest news.

Next