Advertisement

ದೀಪಕ್‌, ಬಶೀರ್‌ ಮನೆಗೆ ಗೃಹ ಸಚಿವ ರಾಮಲಿಂಗಾ ರೆಡ್ಡಿ ಭೇಟಿ

09:54 AM Jan 13, 2018 | |

ಸುರತ್ಕಲ್ : ಇತ್ತೀಚೆಗೆ ದುಷ್ಕರ್ಮಿಗಳ ಇರಿತಕ್ಕೆ ಈಡಾಗಿ ನಿಧನ ಹೊಂದಿದ ಕಾಟಿಪಳ್ಳದ ದೀಪಕ್‌ ರಾವ್‌ ಮನೆಗೆ ಗೃಹ ಸಚಿವ ರಾಮಲಿಂಗಾ ರೆಡ್ಡಿ ಭೇಟಿ ನೀಡಿ ದೀಪಕ್‌ ತಾಯಿ ಹಾಗೂ ಕುಟುಂಬಕ್ಕೆ ಸಾಂತ್ವಾನ ಹೇಳಿದರು.

Advertisement

ಬಳಿಕ ಮಾಧ್ಯಮದೊಂದಿಗೆ ಮಾತನಾಡಿ, ಆರೋಪಿಗಳಿಗೆ ತಕ್ಕ ಶಿಕ್ಷೆಯಾದಲ್ಲಿ ದೀಪಕ್‌ ರಾವ್‌ ಆತ್ಮಕ್ಕೆ ಶಾಂತಿ ಸಿಕ್ಕಂತೆ. ಪೊಲೀಸರು ಈ ಬಗ್ಗೆ ಕ್ರಮ ಕೈಗೊಳ್ಳಲಿದ್ದಾರೆ. ಮುಖ್ಯಮಂತ್ರಿಗಳು ಇತ್ತೀಚೆಗೆ ಆಗಮಿಸಿ ಪರಿಹಾರ ನೀಡುವಲ್ಲಿ ಮುತುವರ್ಜಿ ವಹಿಸಿದ್ದಾರೆ ಎಂದರು.

ಶರತ್‌ ಮಡಿವಾಳ ಕುಟುಂಬಕ್ಕೆ ಸರಿಯಾಗಿ ಪರಿಹಾರ ಸಿಕ್ಕಿಲ್ಲ ಎಂಬ ದೂರುಗಳಿವೆ ಎಂಬ ಪ್ರಶ್ನೆಗೆ ಆ ಸಂದರ್ಭ ತಾನು ಗೃಹ ಮಂತ್ರಿಯಾಗಿರಲಿಲ್ಲ. ಈ ಬಗ್ಗೆ ಪರಿಶೀಲಿಸಲಾಗುವುದು ಎಂದರು. ಶಾಸಕ ಮೊದಿನ್‌ ಬಾವಾ, ಪ್ರತಿಭಾ ಕುಳಾಯಿ, ಭಾಸ್ಕರ ಮೊಲಿ, ಸುಧೀರ್‌ ಟಿ.ಕೆ., ಮಂಗಳೂರು ಪೊಲೀಸ್‌ ಕಮಿಷನರ್‌ ಟಿ.ಆರ್‌. ಸುರೇಶ್‌ ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದರು.

ಮಹಾನಗರ : ಹತ್ಯೆಗೀಡಾದ ಅಬ್ದುಲ್‌ ಬಶೀರ್‌ ಅವರ ಮನೆಗೆ ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರು ಶುಕ್ರವಾರ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

ಶಾಸಕ ಬಿ.ಎ. ಮೊಯಿದಿನ್‌ ಬಾವಾ, ಕಾರ್ಪೊರೇಟರ್‌ಗಳಾದ ದೀಪಕ್‌ ಪೂಜಾರಿ, ಪ್ರತಿಭಾ ಕುಳಾಯಿ, ಭಾಸ್ಕರ ಮೊಲಿ, ಕೆ.ಎಸ್‌. ಆರ್‌.ಟಿ.ಸಿ. ನಿರ್ದೇಶಕ ಟಿ.ಕೆ. ಸುಧೀರ್‌, ಪೊಲೀಸ್‌ ಆಯುಕ್ತ ಟಿ.ಆರ್‌. ಸುರೇಶ್‌ ಮೊದಲಾದವರಿದ್ದರು. ಬಶೀರ್‌ ಅವರ ಪುತ್ರ ಇರ್ಫಾನ್‌, ಸಹೋದರ ಅಬ್ದುಲ್‌ ಲತೀಫ್‌, ಚಿಕ್ಕಪ್ಪನ ಪುತ್ರರಾದ ಅಲಿ, ಮಹಮದ್‌ ಹನೀಫ್‌, ಕುಟುಂಬದ ಸದಸ್ಯರು ಉಪಸ್ಥಿತರಿದ್ದರು. ಕೃತ್ಯ ಎಸಗಿದವರಿಗೆ ಶಿಕ್ಷೆಯಾಗಬೇಕು; ಕೃತ್ಯದಲ್ಲಿ 7 ಮಂದಿ ಇದ್ದರು ಎನ್ನಲಾ ಗುತ್ತಿದ್ದು, ಈಗಾಗಲೇ ನಾಲ್ವರನ್ನು ಬಂಧಿಸಲಾಗಿದ್ದು, ಇನ್ನುಳಿದ ಎಲ್ಲ ಆರೋಪಿಗಳನ್ನು ಬಂಧಿಸಬೇಕು. ಅಲ್ಲದೆ ಇದರ ಹಿಂದಿರುವ ಶಕ್ತಿಗಳನ್ನು ಪತ್ತೆ ಮಾಡಬೇಕೆಂದು ಕುಟುಂಬಸ್ಥರು ಮನವಿ ನೀಡಿದರು. ಈ ಬಗ್ಗೆ ಪೊಲೀಸ್‌ ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next