Advertisement

ಕೋವಿಡ್ ಲಸಿಕೆಯಲ್ಲಿ ಅಕ್ರಮ ಮಾಡಿದವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ: ಬೊಮ್ಮಾಯಿ

12:50 PM May 24, 2021 | Team Udayavani |

ಬೆಂಗಳೂರು: ಕೋವಿಡ್ ಲಸಿಕೆ ಅಕ್ರಮ ಮಾಡುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅಂಥವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೆಮಿಡಿಸಿವಿರ್ ಇಂಜೆಕ್ಷನ್ ವಿಷಯದಲ್ಲಿ ಅಕ್ರಮ ಮಾಡಿದ್ದರು. ಆ ನಂತರ ಅದು ಸರಿ ಹೋಗಿದೆ. ಈಗ ವ್ಯಾಕ್ಸಿನೇಷನ್‌ ನಲ್ಲಿ ಅಕ್ರಮ ದಂಧೆ ಅವಕಾಶ ಕೊಡುವುದಿಲ್ಲ, ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದರು.

ಲಸಿಕೆ ಕೊರತೆ ವಿಚಾರದ ಬಗ್ಗೆ ಮಾತನಾಡಿದ ಅವರು, ಲಸಿಕೆ ಕೊರತೆ ನೀಗಿಸಲು ಹಂತ ಹಂತವಾಗಿ ಕ್ರಮ ಕೈಗೊಳ್ಳಲಾಗುತ್ತಿದೆ. ಖಾಸಗಿಯವರು ಹೆಚ್ಚಿನ ದರದಲ್ಲಿ ವ್ಯಾಕ್ಸಿನೇಷನ್‌ ನೀಡುವ ಸಂಬಂಧ ಕೇಂದ್ರ ಒಂದು ನಿಯಮ ರೂಪಿಸುವ ಅಗತ್ಯವಿದೆ ಎಂದರು.

ಇದನ್ನೂ ಓದಿ:ಯೋಗೀಶ್ ಗೌಡ ಹತ್ಯೆ ಪ್ರಕರಣ: ವಿನಯ್ ಕುಲಕರ್ಣಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್

ಇಂದಿನಿಂದ ಲಾಕ್ ಡೌನ್ ವಿಸ್ತರಣೆ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ಇಂದಿನಿಂದ ಇನ್ನಷ್ಟು ಬಿಗಿ ಕ್ರಮಕ್ಕೆ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಅನಗತ್ಯವಾಗಿ ಓಡಾಡುವ ವಾಹನಗಳ ವಶಕ್ಕೆ ಪಡೆದು ಪ್ರಕರಣ ದಾಖಲಿಸುವ ಕ್ರಮ ಮುಂದುವರಿಸಲಾಗುತ್ತದೆ. ಯಾವುದೇ ಕಾರಣಕ್ಕೂ ಅನಗತ್ಯವಾಗಿ ಓಡಾಡುವವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

Advertisement

ಗ್ರಾಮೀಣ ಪ್ರದೇಶಗಳಲ್ಲಿ ಲಾಕ್ ಡೌನ್ ಪರಿಣಾಮಕಾರಿಯಾಗುತ್ತಿದೆ. ಆದರೆ ಪಟ್ಟಣ ಪ್ರದೇಶದಲ್ಲಿ ಉಲ್ಲಂಘನೆ ಪ್ರಕರಣ ಜಾಸ್ತಿಯಾಗುತ್ತಿದೆ. ಹೀಗಾಗಿ ಬಿಗಿ ಕ್ರಮದ ಅನಿವಾರ್ಯತೆಯಿದೆ. ಈ ನಿಟ್ಟಿನಲ್ಲಿ ಇನ್ಮುಂದೆ ಬಿಗಿ ಕ್ರಮಕ್ಕೆ ಕಟ್ಟು ನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಬೊಮ್ಮಾಯಿ ಹೇಳಿದರು

Advertisement

Udayavani is now on Telegram. Click here to join our channel and stay updated with the latest news.

Next