Advertisement

ಗ್ಯಾಂಗ್ ರೇಪ್ ಕೇಸ್; ಗೃಹ ಸಚಿವರ ಅಸಾಮರ್ಥ್ಯವೇ ಕಾರಣ: ಸಿದ್ದರಾಮಯ್ಯ ಆಕ್ರೋಶ

06:47 PM Apr 01, 2023 | Team Udayavani |

ಬೆಂಗಳೂರು: ‘‘ಬೆಂಗಳೂರಿನ ಕಗ್ಗಲೀಪುರದ ಬಾಲಕಿಯ ಅತ್ಯಾಚಾರ ಪ್ರಕರಣ ನಡೆದು ವಾರ ಕಳೆದಿಲ್ಲ ಅಷ್ಟರಲ್ಲೇ ಕೋರಮಂಗಲದ ಯುವತಿಯನ್ನು ನಾಲ್ವರು ರಾಕ್ಷಸರು ಅತ್ಯಾಚಾರಗೈದು ಅಟ್ಟಹಾಸ ಮೆರೆದಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಜೀವಂತವಾಗಿದೆ ಎಂಬ ನಂಬಿಕೆಯನ್ನೇ ಜನ ಕಳೆದುಕೊಂಡಿದ್ದಾರೆ ” ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸರಣಿ ಟ್ವೀಟ್ ಗಳ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ.

Advertisement

”ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಅದಕ್ಷತೆಯಿಂದಾಗಿ ರಾಜ್ಯದ ಪೊಲೀಸ್ ಇಲಾಖೆ ಸಂಪೂರ್ಣವಾಗಿ ಹಾದಿ ತಪ್ಪಿದೆ. ಚುನಾವಣಾ ಕಾಲದಲ್ಲಿ ಈ ರೀತಿಯ ಪೊಲೀಸ್ ನಿಷ್ಕ್ರಿಯತೆ ಅಪಾಯಕಾರಿಯಾದುದು. ಆದ್ದರಿಂದ ಚುನಾವಣಾ ಆಯೋಗ ಪೊಲೀಸ್ ಇಲಾಖೆಯ‌ ಕಾರ್ಯನಿರ್ವಹಣೆಯ ಮೇಲೆ ನಿಗಾ ಇಡಬೇಕು ಎಂದು ಮನವಿ‌ ಮಾಡುತ್ತೇನೆ ” ಎಂದು ಟ್ವೀಟ್ ಮಾಡಿದ್ದಾರೆ.

”ಕಠಿಣ ಕ್ರಮದ ಭರವಸೆ ನೀಡುವ ಗೃಹಸಚಿವರು ಸ್ಯಾಂಟ್ರೋ ರವಿ ಹೇಳುವ ವರ್ಗಾವಣೆ ಮಾಡಿಸಲಷ್ಟೇ ಶಕ್ತರು ಎಂಬ ಜನರ ಮಾತು ನಿಜವಾಗಿದೆ. ಸಾಮರ್ಥ್ಯ, ನೈತಿಕತೆ ಈ ಯಾವುದೂ ಇಲ್ಲದೆ ಕುರ್ಚಿಗೆ ಅಂಟಿಕೊಂಡು ಕೂತಿರುವ ಆರಗ ಜ್ಞಾನೇಂದ್ರ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸುತ್ತೇನೆ” ಎಂದು ಆಕ್ರೋಶ ಹೊರ ಹಾಕಿದ್ದಾರೆ.

”ರಾಜ್ಯದಲ್ಲಿ ಕುಸಿದಿರುವ ಕಾನೂನು ಸುವ್ಯವಸ್ಥೆ ಬಗ್ಗೆ ಸದನದಲ್ಲಿ ಪ್ರಶ್ನೆ ಮಾಡಿದಾಗ ಮೈಮೇಲೆ ಕಂಬಳಿಹುಳ ಬಿದ್ದವರಂತೆ ಕುಣಿದಾಡಿ, ಎಗರಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಅಸಾಮರ್ಥ್ಯವೇ ಈ ಎಲ್ಲಾ ದೌರ್ಜನ್ಯಗಳಿಗೆ ಕಾರಣ. ದುಷ್ಟರನ್ನು, ಸಮಾಜಘಾತುಕರನ್ನು ಹಿಡಿದು ಸದೆಬಡಿಯಬೇಕಿದ್ದ ಬಿಜೆಪಿ ಸರ್ಕಾರ, ಬದಲಿಗೆ ರೌಡಿ ಶೀಟರ್ ಗಳು, ಕೊಲೆಗಡುಕರನ್ನು ರತ್ನಗಂಬಳಿ ಹಾಸಿ, ಸನ್ಮಾನಿಸಿ ಪಕ್ಷಕ್ಕೆ ಸೇರಿಸಿಕೊಂಡಿದ್ದರ ಫಲವನ್ನು ಜನಸಾಮಾನ್ಯರು ಉಣ್ಣಬೇಕಿದೆ.” ಎಂದು ಟ್ವೀಟ್ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next