Advertisement

ಪಿಎಫ್ಐ ಫ‌ಂಡಿಂಗ್‌: ವರದಿ ನೀಡಿದ ಇ.ಡಿ.

09:49 AM Feb 21, 2020 | Team Udayavani |

ಹೊಸದಿಲ್ಲಿ: ಇತ್ತೀಚೆಗೆ ನಡೆದ, ಸಿಎಎ ವಿರುದ್ಧದ ಪ್ರತಿಭಟನೆಗಳಿಗೆ ಪಾಪ್ಯುಲರ್‌ ಫ್ರಂಟ್‌ ಆಫ್ ಇಂಡಿಯಾ (ಪಿಎಫ್ಐ) ಧನಸಹಾಯ ನೀಡಿದೆ ಎಂಬ ಆರೋಪಗಳ ಬಗ್ಗೆ ಜಾರಿ ನಿರ್ದೇಶನಾಲಯವು ತಾನು ನಡೆಸಿರುವ ತನಿಖಾ ವರದಿಯನ್ನು ಕೇಂದ್ರ ಗೃಹ ಇಲಾಖೆಗೆ ಸಲ್ಲಿಸಿದೆ.

Advertisement

ಇದರ ಹೊರತಾಗಿಯೂ, ಗೃಹ ಇಲಾಖೆ, ಕೆಲವು ರಾಜ್ಯ ಸರಕಾರಗಳು ಹಾಗೂ ತನಿಖಾ ಸಂಸ್ಥೆಗಳನ್ನು ಸಂಪರ್ಕಿಸಿ ಈ ಕುರಿತಂತೆ ಹೆಚ್ಚಿನ ಮಾಹಿತಿಯಿದ್ದರೆ ರವಾನಿಸುವಂತೆ ಸೂಚನೆ ನೀಡಿದೆ.

ಇ.ಡಿ. ಸಲ್ಲಿಸಿರುವ ವರದಿಯ ಬಗ್ಗೆ ಪ್ರತಿಕ್ರಿಯಿಸಿರುವ ಇಲಾಖೆಯ ಅಧಿಕಾರಿಗಳು, ‘ಜಾರಿ ನಿರ್ದೇಶನಾಲಯ ಸಲ್ಲಿಸಿರುವ ವರದಿಯನ್ನು ಮೊದಲು ಪರೀಕ್ಷಿಸಲಾಗುತ್ತದೆ” ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next