Advertisement

ಗಾಂಧಿ ಕುಟುಂಬಕ್ಕೆ ಕೇಂದ್ರದಿಂದ ಮೂಗುದಾರ: 3 ಟ್ರಸ್ಟ್ ಅವ್ಯವಹಾರ ವಿರುದ್ಧ ಕೇಂದ್ರದ ತನಿಖೆ!

03:17 PM Jul 08, 2020 | Nagendra Trasi |

ನವದೆಹಲಿ:ಹಣಕಾಸು ಅವ್ಯವಹಾರಕ್ಕೆ ಸಂಬಂಧಿಸಿದಂತೆ ಗಾಂಧಿ ಕುಟುಂಬದ ಮೂರು ಟ್ರಸ್ಟ್ ಗಳಾದ ರಾಜೀವ್ ಗಾಂಧಿ ಫೌಂಡೇಶನ್, ರಾಜೀವ್ ಗಾಂಧಿ ಚಾರಿಟೇಬಲ್ ಟ್ರಸ್ಟ್ ಮತ್ತು ಇಂದಿರಾಗಾಂಧಿ ಮೆಮೋರಿಯಲ್ ಟ್ರಸ್ಟ್ ಮೇಲೆ ಆದಾಯ ತೆರಿಗೆ ಮತ್ತು ವಿದೇಶಿ ದೇಣಿಗೆ ನಿಯಮ ಉಲ್ಲಂಘನೆ ಆರೋಪದ ಮೇಲೆ ತನಿಖೆ ನಡೆಸುವುದಾಗಿ ಗೃಹ ಸಚಿವಾಲಯ ತಿಳಿಸಿದೆ.

Advertisement

ಗೃಹ ಸಚಿವಾಲಯದ ವಕ್ತಾರ ಈ ವಿಷಯವನ್ನು ಖಚಿತಪಡಿಸಿದ್ದು, ಜಾರಿ ನಿರ್ದೇಶನಾಲಯದ ಮುಖ್ಯಸ್ಥರು ಈ ಸಮಿತಿಯ ಮುಖ್ಯಸ್ಥರು ಎಂದು ಹೇಳಿದೆ. ಅಷ್ಟೇ ಅಲ್ಲ ಈ ಅವ್ಯವಹಾರ ತನಿಖೆಯ ಸಮಿತಿಯಲ್ಲಿ ಸಿಬಿಐ ಕೂಡಾ ಒಂದು ಭಾಗವಾಗಿದೆ ಎಂದು ಹೇಳಿದೆ.

ರಾಜೀವ್ ಗಾಂಧಿ ಫೌಂಡೇಶನ್ ಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಚಿದಂಬರಂ ಟ್ರಸ್ಟಿಗಳಾಗಿದ್ದಾರೆ. ಈ ಟ್ರಸ್ಟ್ ಅನ್ನು 1991ರಲ್ಲಿ ಸ್ಥಾಪಿಸಲಾಗಿತ್ತು. ರಾಜೀವ್ ಗಾಂಧಿ ಫೌಂಡೇಶನ್ ಮತ್ತು ರಾಜೀವ್ ಗಾಂಧಿ ಚಾರಿಟೇಬಲ್ ಗೆ ಸೋನಿಯಾ ಗಾಂಧಿ ಅವರು ಅಧ್ಯಕ್ಷರಾಗಿದ್ದರು. ಅಷ್ಟೇ ಅಲ್ಲ ಸೋನಿಯಾ ಅವರು ಇಂದಿರಾ ಗಾಂಧಿ ಮೆಮೋರಿಯಲ್ ಟ್ರಸ್ಟ್ ನ ವಿದೇಶಿ ಕಾರ್ಯ, ವ್ಯವಹಾರದ ಬಗ್ಗೆಯೂ ನೋಡಿಕೊಳ್ಳುತ್ತಿದ್ದರು ಎಂದು ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next