Advertisement

ನೆರೆ ಸಂತ್ರಸ್ತರಿಗೆ ಮನೆ ಮಂಜೂರಾತಿ ಪತ್ರ

02:38 PM Dec 22, 2019 | Suhan S |

ಹಿರೇಕೆರೂರ: ನೆರೆಯಿಂದ ಮನೆ ಕಳೆದುಕೊಂಡ ಬಡವರಿಗೆ ಸರ್ಕಾರ ಮನೆಗಳನ್ನು ಮಂಜೂರು ಮಾಡಿದ್ದು, ಫಲಾನುಭವಿಗಳು ಮನೆ ನಿರ್ಮಿಸಿಕೊಳ್ಳುವ ಮೂಲಕ ಸರ್ಕಾರದ ಯೋಜನೆ ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ಬಿ.ಸಿ. ಪಾಟೀಲ ಹೇಳಿದರು.

Advertisement

ಪಟ್ಟಣದ ಗುರುಭವನದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯತ, ಪಟ್ಟಣ ಪಂಚಾಯತ ಆಶ್ರಯದಲ್ಲಿ ನಡೆದ ನೆರೆ ಸಂತ್ರಸ್ತ ಫಲಾನುಭವಿಗಳಿಗೆ ಮನೆ ಮಂಜೂರಾತಿ ಕಾಮಗಾರಿ ಆದೇಶ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಅವರು ಫಲಾನುಭವಿಗಳಿಗೆ ಕಾಮಗಾರಿ ಆದೇಶ ಪತ್ರ ವಿತರಿಸಿ ಅವರು ಮಾತನಾಡಿದರು. ನೆರೆ, ಪ್ರವಾಹ ಹೆಚ್ಚಾಗಿ ಜನ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರು ಒಂದು ತಿಂಗಳ ಕಾಲ ಪ್ರವಾಸ ಮಾಡಿ ಮನೆ ಕಳೆದುಕೊಂಡವರಿಗೆ ಸೂರು ಕಲ್ಪಿಸಬೇಕು ಎಂಬ ಉದ್ದೇಶದಿಂದ ಸಂಪೂರ್ಣ ಮನೆ ಕಳೆದುಕೊಂಡವರಿಗೆ ರೂ. 5ಲಕ್ಷ ವೆಚ್ಚದಲ್ಲಿ ಮನೆ ನಿರ್ಮಿಸಿಕೊಳ್ಳಲು ಸರ್ಕಾರ ಮಂಜೂರಾತಿ ನೀಡಿದೆ. ಮತ್ತು ಪೂರ್ಣ ಮನೆ ಕಳೆದುಕೊಂಡವರಿಗೆ 3 ತಿಂಗಳು ಬಾಡಿಗೆ ನೀಡಿದ ಸರ್ಕಾರ ಅದು ಕರ್ನಾಟಕದ ಯಡಿಯೂರಪ್ಪ ನೇತೃತ್ವದ ಸರ್ಕಾರವಾಗಿದೆ. ಗುಡಿಸಲು ರಹಿತ ತಾಲೂಕನ್ನಾಗಿಸಲು ನಾನು ಮತ್ತು ಯು.ಬಿ. ಬಣಕಾರ ತೀರ್ಮಾನಿಸಿ ವಸತಿ ರಹಿತರ ಪಟ್ಟಿ ತಯಾರಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಧಿಕಾರಿಗಳು ಪ್ರಾಮಾಣಿಕತೆಯಿಂದ ಕೆಲಸ ನಿರ್ವಹಿಸಿ ಅರ್ಹರ ಪಟ್ಟಿ ನೀಡಬೇಕು ಎಂದು ಹೇಳಿದರು.

ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ. ಬಣಕಾರ ಮಾತನಾಡಿ, ನೆರೆ ಹಾವಳಿಯಿಂದ ನೊಂದವರಿಗೆ ಸ್ಪಂದಿಸಿದ ಮುಖ್ಯಮಂತ್ರಿ ಯಡಿಯೂರಪ್ಪನವರು ಮನೆ ನಿರ್ಮಿಸಿಕೊಳ್ಳಲು 5 ಲಕ್ಷ ರೂ.ನೀಡುವ ಯೋಜನೆ ಜಾರಿಗೆ ತಂದಿದ್ದಾರೆ. ಫಲಾನುಭವಿಗಳು ಮನೆ ಕಟ್ಟುವುದಕ್ಕೆ ನಿರ್ಲಕ್ಯ ತೋರಬಾರದು. ಏನಾದರು ಸಮಸ್ಯೆಗಳು ಕಂಡುಬಂದಲ್ಲಿ ಕೂಡಲೇ  ಅಧಿಕಾರಿಗಳು, ಜನಪ್ರತಿನಿ ಧಿಗಳ ಗಮನಕ್ಕೆ ತಂದು ಪರಿಹರಿಸಿಕೊಂಡು ವಿಳಂಬ ಮಾಡದೇ ಮನೆ ನಿಮಿಸಿಕೊಳ್ಳಬೇಕು ಎಂದರು.

ಹಿರೇಕೆರೂರ ಮತ್ತು ರಟ್ಟಿಹಳ್ಳಿ ತಾಲೂಕಿನ ವಿವಿಧ ಗ್ರಾಮಗಳ 141 ಫಲಾನುಭವಿಗಳಿಗೆ ಮನೆ ಮಂಜೂರಾತಿ ಕಾಮಗಾರಿ ಆದೇಶ ಪತ್ರ ವಿತರಿಸಲಾಯಿತು. ತಹಶೀಲ್ದಾರ್‌ ಆರ್‌.ಎಚ್‌.ಭಾಗವಾನ್‌, ತಾಲೂಕ ಪಂಚಾಯತ ಅಧ್ಯಕ್ಷ ರಾಜು ಬಣಕಾರ, ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀನಿವಾಸ ಎಚ್‌.ಜಿ., ಮೋಹನಕುಮಾರ, ಪಪಂ ಮುಖ್ಯಾಧಿಕಾರಿ ರಾಜಾರಾಮ್‌ ಪವಾರ, ಪಪಂ ಸದಸ್ಯರಾದ ಅಶೋಕ ಜಾಡಬಂಡಿ, ಮಹೇಂದ್ರ ಬಡಳ್ಳಿ, ಗುರುಶಾಂತಪ್ಪ ಎತ್ತಿನಹಳ್ಳಿ, ಅಲ್ತಾಫ್‌ ಖಾನ್‌ ಪಠಾಣ್‌, ರಮೇಶ ಕೋಡಿಹಳ್ಳಿ, ಹನುಮಂತಪ್ಪ ಕುರುಬರ, ರಾಜು ಕರಡಿ, ಚಂದ್ರಕಲಾ ಕೋರಿಗೌಡ್ರ, ರಜಿಯಾ ಅಸದಿ, ಸುಧಾ ಚಿಂದಿ, ಕವಿತಾ ಹಾರ್ನಳ್ಳಿ ಸೇರಿದಂತೆ ಗ್ರಾಪಂ ಅಧ್ಯಕ್ಷರು, ಸದಸ್ಯರು, ಫಲಾನುಭವಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next