Advertisement
ಕೊಡಗಿನ ವಿವಿಧೆಡೆ ಸಂಭವಿಸಿದ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಹಾರ ಕಾರ್ಯಗಳ ಪ್ರಗತಿ ಪರಿಶೀಲಿಸಿದ ಅನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈಗಾಗಲೇ ಮುಖ್ಯಮಂತ್ರಿ ಅವರು ರಾಜ್ಯಾದ್ಯಂತ ಪ್ರವಾಸಕೈಗೊಂಡು, ಅತಿವೃಷ್ಟಿ ಪ್ರದೇಶ ಗಳಿಗೆ ಭೇಟಿ ನೀಡಿ ಪರಿಹಾರ ವಿತರಿಸಲು ಕ್ರಮ ಕೈಗೊಂಡಿದ್ದಾರೆ. ಇನ್ನೂ ಎಂಟು ಹತ್ತು ದಿನದಲ್ಲಿ ಬೆಳೆ ಪರಿಹಾರ ವಿತರಿಸಲಾಗುವುದು. ಈಗಾಗಲೇ 10 ಸಾವಿರ ಮತ್ತು 25 ಸಾವಿರ ರೂ. ಪರಿಹಾರ ವಿತರಿಸಲಾಗಿದೆ. ಇದುವರೆಗೆ 4.60 ಕೋಟಿ ರೂ. ಪರಿಹಾರ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.
ವಿ. ಸೋಮಣ್ಣ ಶುಕ್ರವಾರ ತೋರ ಗ್ರಾಮಕ್ಕೆ ಭೇಟಿ ನೀಡಿ ಭೂ ಕುಸಿತದಿಂದ ತಾಯಿ, ಪತ್ನಿ, ಎರಡು ಹೆಣ್ಣು ಮಕ್ಕಳನ್ನು ಕಳೆದುಕೊಂಡ ಪ್ರಭು ಅವರಿಗೆ ಸಾಂತ್ವನ ಹೇಳಿ ತಲಾ 4 ಲಕ್ಷ ರೂ.ಗಳ ಮೂರು ಚೆಕ್ ಹಸ್ತಾಂತರಿಸಿದರು. ಸಂತ್ರಸ್ತರಲ್ಲಿ ಧೈರ್ಯ ತುಂಬಬಹುದು. ಆದರೆ ಕುಟುಂಬದವರನ್ನು ಕರೆ ತರಲು ಸಾಧ್ಯವೇ ಎಂದು ಸಚಿವರು ನೋವಿನಿಂದ ನುಡಿದರು.