Advertisement

ಬಂಗಾಲಿ ವಿದ್ಯಾರ್ಥಿಗಳಿಗೆ ಒಲಿದ ತವರಿನ ಭಾಗ್ಯ

12:23 PM Jun 24, 2020 | Team Udayavani |

ಮಹಾನಗರ: ಡಾ| ಪಿ. ದಯಾನಂದ ಪೈ-ಪಿ.ಸತೀಶ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ಬಿ.ಎಸ್‌.ಡಬ್ಲ್ಯು. ಪದವಿ ವ್ಯಾಸಂಗ ಮಾಡುತ್ತಿರುವ ಮೂಲತಃ ಪಶ್ಚಿಮ ಬಂಗಾಲದ ಸಿಲಿಗುರಿ ಜಿಲ್ಲೆಯ ಹತ್ತು ವಿದ್ಯಾರ್ಥಿಗಳು ವಿಮಾನ ಮೂಲಕ ಸುರಕ್ಷಿತವಾಗಿ ಹುಟ್ಟೂರಿಗೆ ಮರಳಿದ್ದಾರೆ.

Advertisement

ಕೋವಿಡ್ ಬಿಕ್ಕಟ್ಟು ಹಾಗೂ ರಾಷ್ಟ್ರವ್ಯಾಪಿ ಲಾಕ್‌ಡೌನ್‌ ಕಾರಣದಿಂದ ಹತ್ತು ಜನ ವಿದ್ಯಾರ್ಥಿಗಳು ತವರಿಗೆ ಹಿಂದಿರುಗಲು ಸಾಧ್ಯವಾಗದೆ ಸಿಕ್ಕಿ ಹಾಕಿಕೊಂಡಿದ್ದರು. ಈ ವೇಳೆ ಕಾಲೇಜಿನ ಪ್ರಾಂಶುಪಾಲ ಪ್ರೊ| ರಾಜಶೇಖರ್‌ ಹೆಬ್ಟಾರ್‌ ಅವರು, ಉಪನ್ಯಾಸಕರ ಹಾಗೂ ಸ್ಥಳೀಯ ದಾನಿಗಳ ನೆರವಿನಿಂದ ಈ ವಿದ್ಯಾರ್ಥಿಗಳಿಗೆ ಅನ್ನ, ವಸತಿ ಹಾಗೂ ಇನ್ನಿತರ ಮೂಲ ಸೌಕರ್ಯ ಒದಗಿಸಿ ಧೈರ್ಯ ತುಂಬಿದರು.

ವಿದ್ಯಾರ್ಥಿಗಳನ್ನು ಹುಟ್ಟೂರಿಗೆ ಕರೆಸಿಕೊಳ್ಳುವ ನಿಟ್ಟಿನಲ್ಲಿ ಹೆತ್ತವರು ಏರ್‌ ಏಷ್ಯಾ ವಿಮಾನಯಾನದ ಅಧಿಕಾರಿ ಗಳನ್ನು ಸಂಪರ್ಕಿಸಿ, ರಿಯಾಯಿತಿ ದರದಲ್ಲಿ ಟಿಕೆಟ್‌ ಕಾಯ್ದಿರಿಸಿಕೊಳ್ಳಲು ವ್ಯವಸ್ಥೆ ಮಾಡಿದರು. ಪ್ರಯಾಣ ವೆಚ್ಚದ ಶೇ. 50ರಷ್ಟು ಏರ್‌ಏಷ್ಯಾ ಭರಿಸಿದರೆ, ಶೇ. 25ರಷ್ಟು ಪ್ರಾಂಶುಪಾಲರು ಹಾಗೂ ಇನ್ನುಳಿದ ಶೇ.25ರಷ್ಟು ಅಲ್ಲಿನ ಎನ್‌ಜಿಒ ಸಂಸ್ಥೆ ಭರಿಸಿತು. ಈ ಮೂಲಕ ವಿದ್ಯಾರ್ಥಿಗಳು ಸುರಕ್ಷಿತವಾಗಿ ತಮ್ಮ ಗ್ರಾಮಕ್ಕೆ ಕಳುಹಿಸಿಕೊಟ್ಟು ಸಂಕಷ್ಟಕ್ಕೆ ಸ್ಪಂದಿಸಿ ತಮ್ಮ ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ.

ಪ್ರಾಂಶುಪಾಲ ಪ್ರೊ| ರಾಜಶೇಖರ್‌ ಹೆಬ್ಟಾರ್‌ ಅವರು ತಮ್ಮ ವೈಯಕ್ತಿಕ ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಮಂಗಳೂರಿನಿಂದ ಬೆಂಗಳೂರಿಗೆ ತೆರಳಲು ಬಸ್‌ ವ್ಯವಸ್ಥೆ ಕಲ್ಪಿಸಿಕೊಟ್ಟರು. ವಿದ್ಯಾರ್ಥಿಗಳಿಗೆ ಪ್ರಯಾಣದ ವೇಳೆ ಅವಶ್ಯವಿರುವ ಎಲ್ಲ ವೈದ್ಯಕೀಯ ಸುರಕ್ಷತಾ ಮುನ್ನೆಚ್ಚರಿಕೆಯ ತಪಾಸಣೆ, ಪ್ರಮಾಣ ಪತ್ರ ಪಡೆಯುವ ಜವಾಬ್ದಾರಿಯನ್ನು ಕಾಲೇಜಿನ ಸಿಬಂದಿ ನಾಗೇಂದ್ರ ಆಚಾರ್ಯ ವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next