Advertisement
ಪಟ್ಟಣ ಪಂಚಾಯತ್ ಆವರಣದಲ್ಲಿ ಶನಿವಾರ ಕೋವಿಡ್ ವಾರಿಯರ್ಗೆ ಊಟ ಬಡಿಸಿ ಅವರು ಮಾತನಾಡಿದರು. ಪಾದರಾಯನಪುರ ಬಡಾವಣೆಯಲ್ಲಿ ಕೋವಿಡ್ ಸೋಂಕಿತರ ಬಗ್ಗೆ ಮಾಹಿತಿ ಪಡೆಯಲು ತೆರಳಿದ್ದ ಸಿಬ್ಬಂದಿ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿರುವುದು ಖಂಡನೀಯ. ಇದಕ್ಕೆ ಕಾರಣರಾದ ಜಮೀರ್ ಅಹಮ್ಮದ್ ಮೇಲೆ ತಕ್ಷಣ ಕೆಪಿಸಿಸಿ ಅಧ್ಯಕ್ಷರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.
ಪಾದರಾಯನಪುರದ ಆರೋಪಿಗಳನ್ನು ಸ್ಥಳಾಂತರಿಸಿದ್ದು ತಪ್ಪು ಎಂದು ಹೇಳುತ್ತಾರೆ. ಇಂತಹ ದ್ವಂದ್ವ ಹೇಳಿಕೆಗಳನ್ನು ಕೊಡುವುದು ಎಷ್ಟು ಸರಿ, ಕುಮಾರಸ್ವಾಮಿ, ಡಿ.ಕೆ. ಶಿವಕುಮಾರ್ ರಾಮನಗರಕ್ಕಷ್ಟೇ ಸೀಮಿತರೇ ಎಂದು ಪ್ರಶ್ನಿಸಿದ ರೇಣುಕಾಚಾರ್ಯ, ವಿಪಕ್ಷ ನಾಯಕರು ಸರ್ಕಾರಕ್ಕೆ ಸಹಕಾರ ನೀಡದೆ ಅಸಹಕಾರ ನೀಡುತ್ತಿದ್ದಾರೆ ಎಂದು ದೂರಿದರು. ಕೋವಿಡ್ ವೈರಸ್ ನಿಯಂತ್ರಣ ಕಾರ್ಯವನ್ನು ಕರ್ನಾಟಕ ಸರ್ಕಾರ ಉತ್ತಮವಾಗಿ ಮಾಡುತ್ತಿದೆ. ಹಾಗಾಗಿ ಆರಂಭದಲ್ಲಿ 3ನೇ ಸ್ಥಾನದಲ್ಲಿದ್ದ ಕರ್ನಾಟಕ, ಈಗ 11ನೇ ಸ್ಥಾನಕ್ಕೆ ಇಳಿದಿದೆ. ಈ ಸಂಬಂಧ ಕೇಂದ್ರ ಆರೋಗ್ಯ ಸಚಿವ ಡಾ| ಹರ್ಷವರ್ಧನ್ ಕೂಡ ಮುಖ್ಯಮಂತ್ರಿಗಳನ್ನು ಪ್ರಶಂಸಿದ್ದಾರೆ ಎಂದು ತಿಳಿಸಿದರು.