Advertisement

“ಗ್ರಾಮಾಂತರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ’

11:44 PM Jun 03, 2019 | Team Udayavani |

ಬ್ರಹ್ಮಾವರ: ಈ ಹಿಂದಿನ ಒಂದು ಅವ ಧಿಯ ಸಂಸದೆಯಾಗಿ ಗ್ರಾಮಾಂತರ ಭಾಗಗಳಲ್ಲಿ ಅನೇಕ ಜನಪರ ಯೋಜನೆಗಳನ್ನು ಆರಂಭಿಸಿ ಅನುಷ್ಠಾನಗೊಳಿಸುವಲ್ಲಿ ಸಾಕಷ್ಟು ಪ್ರಯತ್ನ ಪಟ್ಟಿದ್ದೇನೆ. ಪುನರಾಯ್ಕೆಯಿಂದ ಮತ್ತಷ್ಟು ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಂಡು ಅದಕ್ಕೆ ವೇಗ ನೀಡುವಲ್ಲಿ ಬದ್ಧಳಾಗಿದ್ದೇನೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

Advertisement

ಬ್ರಹ್ಮಾವರದ ಮದರ್‌ ಪ್ಯಾಲೇಸ್‌ ಸಭಾಂಗಣದಲ್ಲಿ ಉಡುಪಿ ಗ್ರಾಮಾಂತರ ಬಿಜೆಪಿ ಆಯೋಜಿಸಿದ ಕಾರ್ಯಕರ್ತರ ಅಭಿನಂದನಾ ಸಭೆಯಲ್ಲಿ ಸಮ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಈ ಬಾರಿ ಕಾರ್ಯಕರ್ತರು ಸಮರೋಪಾದಿಯಲ್ಲಿ ದುಡಿದು ಪಕ್ಷವನ್ನು ಮತ್ತೆ ಅ ಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರ ಶ್ರಮಕ್ಕೆ ನರೇಂದ್ರ ಮೋದಿ ನೇತೃತ್ವದ ಸರಕಾರವು ಪ್ರತಿಫಲವನ್ನು ನೀಡಲಿದೆ ಎಂದರು.

ಕಾರ್ಯಕರ್ತರೇ ಆಸ್ತಿ
ಶಾಸಕ ಕೆ. ರಘುಪತಿ ಭಟ್‌ ಮಾತನಾಡಿ, ಬಿಜೆಪಿ ಪಕ್ಷಕ್ಕೆ ಕಾರ್ಯಕರ್ತರೇ ಬಹು ದೊಡ್ಡ ಆಸ್ತಿ, ಅವರ ನಿಸ್ವಾರ್ಥ ಸೇವೆ ದೇಶಾಭಿಮಾನದಿಂದ ಇಂದು ಮತ್ತೆ ಪಕ್ಷವು ರಾಷ್ಟ್ರದಲ್ಲಿ ಪ್ರಬಲವಾಗಿ ಬೆಳೆದು ನಿಂತಿದೆ. ಅವರೆಲ್ಲರಿಗೂ ಪಕ್ಷದ ಪರವಾಗಿ ಚಿರಋಣಿಯಾಗಿದ್ದೇನೆ ಎಂದು ಕೃತಜ್ಞತೆ ಸಲ್ಲಿಸಿದರು.

ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ್‌ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ಸಂಧ್ಯಾ ರಮೇಶ್‌, ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ತಾ.ಪಂ. ಅಧ್ಯಕ್ಷೆ ನಳಿನಿ ಪ್ರದೀಪ್‌ ಕುಮಾರ್‌, ಉಡುಪಿ ಗ್ರಾಮಾಂತರ ಬಿಜೆಪಿ ಅಧ್ಯಕ್ಷ ಮಾರಾಳಿ ಪ್ರತಾಪ್‌ ಹೆಗ್ಡೆ, ಪ್ರಧಾನ ಕಾರ್ಯದರ್ಶಿಗಳಾದ ರಾಜೀವ್‌ ಕುಲಾಲ್‌, ಕಮಲಾಕ್ಷ ಹೆಬ್ಟಾರ್‌, ಉಡುಪಿ ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಭಾರಿ ಚಿಟ್ಟೆ ರಾಜಗೋಪಾಲ ಹೆಗ್ಡೆ, ಪ್ರಮುಖರಾದ ಹರಿಮಕ್ಕಿ ರತ್ನಾಕರ ಶೆಟ್ಟಿ, ಬಿ.ಎನ್‌. ಶಂಕರ ಪೂಜಾರಿ, ಜ್ಞಾನವಸಂತ ಶೆಟ್ಟಿ, ಮೋಹನ್‌ ಶೆಟ್ಟಿ, ವೀಣಾ ನಾಯ್ಕ, ಸುಪ್ರಸಾದ್‌ ಶೆಟ್ಟಿ ಮೊದಲಾದವರು ಹಾಜರಿದ್ದರು.ರಾಜು ಪೂಜಾರಿ ಉಪ್ಪೂರು ವಂದಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next