Advertisement

ಪಕ್ಷ ಸಂಘಟನೆಗೆ ಪ್ರಾಮಾಣಿಕವಾಗಿ ಶ್ರಮಿಸಿ

11:59 AM Oct 27, 2017 | |

ಧಾರವಾಡ: ಈಗಾಗಲೇ ಜಿಲ್ಲಾದ್ಯಂತ ವಾರ್ಡ್‌ ಕಮಿಟಿಗಳನ್ನು ರಚನೆ ಮಾಡಲಾಗಿದ್ದು, ಅದೇ ರೀತಿಯಲ್ಲಿ ಬೂತ್‌ ಕಮಿಟಿಗಳನ್ನು ಮಾಡಬೇಕು ಎಂದು ಜೆಡಿಎಸ್‌ ಪಕ್ಷದ ಜಿಲ್ಲಾ ವೀಕ್ಷಕ ಮರಿಲಿಂಗೇಗೌಡ ಹೇಳಿದರು. ನಗರದ ನಿವೃತ್ತ ನೌಕರರ ಭವನದಲ್ಲಿ ಜರುಗಿದ ಜೆಡಿಎಸ್‌ ಪಕ್ಷದ ಬೂತಮಟ್ಟದ ವೀಕ್ಷಕರ ಸಭೆ ಉದ್ಘಾಟಿಸಿ ಮಾತನಾಡಿದರು.

Advertisement

ಜಿಲ್ಲೆಯ ವಿಧಾನ ಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಪಕ್ಷ ಸಂಘಟನೆ ಅವಶ್ಯವಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಕಾರ್ಯಕರ್ತರು ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದರು. ರಾಜ್ಯ ಉಪಾಧ್ಯಕ್ಷ ಗುರುರಾಜ ಹುಣಸಿಮರದ ಮಾತನಾಡಿ, ಪಕ್ಷದಲ್ಲಿ ಪ್ರಾಮಾಣಿಕವಾಗಿ ದುಡಿದವರಿಗೆ ಮಾತ್ರ ಚುನಾವಣೆಯಲ್ಲಿ ಟಿಕೆಟ್‌ ನೀಡಲಾಗುತ್ತಿದ್ದು, ಹೊರಗಿನವರಿಗೆ ಅವಕಾಶವಿಲ್ಲ.

ಅಭ್ಯರ್ಥಿಗಳು ಯಾರೇ ಆಗಿದ್ದರೂ ಕಾರ್ಯಕರ್ತರು ಅವರ ಗೆಲುವಿಗೆ ಶ್ರಮಿಸಬೇಕು. ಜೆಡಿಎಸ್‌ ಪಕ್ಷದ ಬಗೆಗೆ ಇಂದಿಗೂ ಸಹ ಪ್ರತಿಯೊಬ್ಬ ನಾಗರಿಕರಿಗೆ ವಿಶ್ವಾಸವಿದೆ. ಪಕ್ಷ ಸಂಘಟನೆಯಲ್ಲಿ ಹಿಂದೆ ಬಿದ್ದಿದ್ದು, ಮುಂದಿನ ದಿನಗಳಲ್ಲಿ ಆ ರೀತಿ ಆಗಬಾರದು. ಅದಕ್ಕೆ ಎಲ್ಲ ಕಾರ್ಯಕರ್ತರು ಸೇರಿಕೊಂಡು ಪಕ್ಷ ಬಲವರ್ಧನೆಗೆ ಹಗಲಿರುಳು ಶ್ರಮಿಸಬೇಕು ಎಂದರು. 

ರಾಜ್ಯ ಜೆಡಿಎಸ್‌ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಬಸವರಾಜ ಭಜಂತ್ರಿ ಅವರನ್ನು ಪಶ್ಚಿಮ ವಿಧಾನಸಭಾ ಕ್ಷೇತ್ರಕ್ಕೆ ಪ್ರಚಾರ ಸಮಿತಿ ಸಂಚಾಲಕರನ್ನಾಗಿ ನೇಮಕ ಮಾಡಿದ್ದು, ಅದರೊಂದಿಗೆ 20 ಜನರ ತಂಡ ನೇಮಕ ಮಾಡಲಾಗಿದೆ. ಇವರೆಲ್ಲರೂ ಪ್ರತಿನಿತ್ಯ ಒಂದೊಂದು ವಾರ್ಡ್‌ಗಳಿಗೆ ತೆರಳಿ ಪಕ್ಷದ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದರು. 

ಹು-ಧಾ ಮಹಾನಗರ ಜಿಲ್ಲಾಧ್ಯಕ್ಷ ರಾಜಣ್ಣ ಕೊರವಿ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಕುಮಾರಸ್ವಾಮಿಯವರಿಗೆ ಬೆಂಬಲ ನೀಡುವವರ ಸಂಖ್ಯೆ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ಕಾರ್ಯಕರ್ತರು  ಹಳ್ಳಿ ಹಳ್ಳಿಗೆ ತೆರಳುವ ಮುಖಾಂತರ ಗ್ರಾಮೀಣ ಮತ್ತು ಹೋಬಳಿ ಮಟ್ಟದಲ್ಲಿಯು ಕಮಿಟಿ ರಚನೆ ಮಾಡಿ ಅವರಿಗೆ ಜವಾಬ್ದಾರಿ ವಹಿಸಬೇಕು. ಇದರಿಂದ ಎಲ್ಲೆಡೆ ಪುನಃ ಜೆಡಿಎಸ್‌ ಪಕ್ಷಕ್ಕೆ ಬೆಂಬಲ ದೊರೆಯಲಿದೆ ಎಂದರು. 

Advertisement

ಮಾಜಿ ಸಚಿವ ಆಲ್ಕೋಡ ಹನುಮಂತಪ್ಪ, ರಾಜು ಅಂಬೋರೆ, ಸುರೇಶ ಹಿರೇಮಠ, ಅಲ್ತಾಫ್‌ ಕಿತ್ತೂರ, ಶ್ರೀಕಾಂತ ಜಮನಾಳ, ಮುಜಾಯಿದ ಕಾಂಟ್ರಾಕ್ಟರ, ದೇವರಾಜ ಕಂಬಳಿ, ಶಾಂತವೀರ ಬೆಟಗೇರಿ, ಜಿಲಾನಿ ಖಾಜಿ, ರಾಜು ಚೌದ್ರಿ, ವೆಂಕಟೇಶ ಸಗಬಾಲ ಇತರರಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next