ಪಿರಿಯಾಪಟ್ಟಣ: ಯುವತಿಯರನ್ನು ಮುಂದಿಟ್ಟುಕೊಂಡು ಹನಿಟ್ರ್ಯಾಪ್ ಮಾಡಿ ಹಣ ಸುಲಿಗೆ ಮಾಡುತ್ತಿದ್ದವರನ್ನು ಸೆರೆಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ನೇರಲೆಕುಪ್ಪೆ ನವೀನ್, ಶಿವರಾಜು, ಹರೀಶ್, ಅನಿತಾ, ವಿಜಯ್ ಬಂಧಿತ ಆರೋಪಿಗಳು. ಇವರ ಮೋಸದ ಜಾಲಕ್ಕೆ ಸಿಲುಕಿ ಕಿರುಕುಳ ತಾಳಲಾರದ ಪಿರಿಯಾಪಟ್ಟಣದ ಡಾ.ಪ್ರಕಾಶ್ ಬಾಬು ರಾವ್ ಎನ್ನುವವರು ಕುವೆಂಪುನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ವ್ಯಕ್ತಿಯಿಂದ ಆರೋಪಿಗಳು 31 ಲಕ್ಷ ರೂ. ಹಣ ವಸೂಲಿ ಮಾಡಿದ್ದರು.
ಡಿಸಿಪಿ ಡಾ.ಎ.ಎನ್.ಪ್ರಕಾಶ್ ಗೌಡ ಮಾರ್ಗದರ್ಶನದಲ್ಲಿ ಪೊಲೀಸರು ಹನಿಟ್ರ್ಯಾಪ್ ಖದೀಮರನ್ನು ಸೆರೆಹಿಡಿದಿದ್ದಾರೆ. ಕುವೆಂಪು ನಗರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ರಾಜು, ರಾಜಶೇಖರ್, ಮಹಾವೀರ, ಮಹದೇವ್ ಸೇರಿದಂತೆ ಹಲವರು ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಇದನ್ನೂ ಓದಿ:ಡಿಸೆಂಬರ್ 5ಕ್ಕೆ ಕರ್ನಾಟಕ ಬಂದ್ ಖಚಿತ: ಕನ್ನಡಪರ ಸಂಘಟನೆಗಳ ನಿರ್ಧಾರ
ಇವರು ಮೈಸೂರು ಜಿಲ್ಲೆ ಪಿರಿಯಾಪಟ್ಟಣ ಮಾತ್ರವಲ್ಲದೆ ಹೊರ ಜಿಲ್ಲೆಗಳಲ್ಲಿಯೂ ಯುವತಿಯರನ್ನು ಬಳಸಿಕೊಂಡು ಹನಿಟ್ರ್ಯಾಪ್ ನಡೆಸುತ್ತಿದ್ದರು ಎನ್ನುವುದು ಇದೀಗ ವಿಚಾರಣೆಯಿಂದ ತಿಳಿದುಬಂದಿದೆ.
ಹೈಪ್ರೊಪೈಲ್ ವ್ಯಕ್ತಿಗಳೂ ಸೇರಿದಂತೆ ಹಲವರನ್ನು ವಶಕ್ಕೆ ತೆಗೆದುಕೊಂಡ ಪೊಲೀಸರು ನ್ಯಾಯಾಂಗದ ಮುಂದೆ ಹಾಜರುಪಡಿಸಿದ್ದಾರೆ. ಪೊಲೀಸರು ಇನ್ನೂ ಕೆಲವರಿಗಾಗಿ ಬಲೆ ಬೀಸಿದ್ದಾರೆ.