Advertisement

ಬೆಂಗಳೂರು: ಯುವ ವೈದ್ಯನ ಆತ್ಮಹತ್ಯೆಗೆ ಹನಿಟ್ರ್ಯಾಪ್‌ ಕಾರಣ!

01:24 PM Jan 14, 2022 | Team Udayavani |

ಬೆಂಗಳೂರು: ಇತ್ತೀಚೆಗೆ ಕೆಂಗೇರಿ ರೈಲ್ವೆ ನಿಲ್ದಾಣ ಸಮೀಪದಲ್ಲಿ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದ ಯುವ ವೈದ್ಯನ ಪ್ರಕರಣ ಮತ್ತೂಂದು ತಿರುವು ಪಡೆದುಕೊಂಡಿದ್ದು, ಆತ್ಮಹತ್ಯೆಗೆ ಹನಿಟ್ರ್ಯಾಪ್‌ ಕಾರಣ ಎಂಬುದು ರೈಲ್ವೆ ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

Advertisement

ಘಟನೆ ಸಂಬಂಧ ಭೂಪಾಲ್‌ ಮೂಲದ ಯುವಕನನ್ನು ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಬಹಳಷ್ಟು ಮಂದಿಗೆ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ತನಿಖೆ ಮುಂದುವರಿದಿದೆ ಎಂದು ಪೊಲೀಸರು ಹೇಳಿದರು. ಮೂರು ತಿಂಗಳ ಹಿಂದೆ ಘಟನೆ ನಡೆದಿತ್ತು. ಆಗಷ್ಟೇ ಎಂಬಿಬಿಎಸ್‌ ವ್ಯಾಸಂಗ ಮುಗಿಸಿದ್ದ ವೈದ್ಯ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿದ್ದರು. ಈ ವೇಳೆ ಭೂಪಾಲ್‌ ಮೂಲದ ಆರೋಪಿ ಯುವತಿ ಎಂದು ನಕಲಿ ಖಾತೆ ತೆರೆದು, ವೈದ್ಯನ ಜತೆ ಚಾಟಿಂಗ್‌ ಆರಂಭಿಸಿದ್ದಾನೆ. ಕ್ರಮೇಣ ಇಬ್ಬರ ನಡುವೆ ಸ್ನೇಹ ಬೆಳದಿದೆ. ಈ ವೇಳೆ ಆರೋಪಿ ಯುವತಿಯ ಅಶ್ಲೀಲ ಫೋಟೋಗಳನ್ನು ಕಳುಹಿಸಿ, ವೈದ್ಯನಿಂದ ಕೆಲವೊಂದು ಫೋಟೋಗಳನ್ನು ಪಡೆದುಕೊಂಡು ಹನಿ ಟ್ರ್ಯಾಪ್‌ ಮಾಡಿದ್ದಾನೆ.

ವೈದ್ಯನ ಫೋಟೋಗಳನ್ನು ಇಟ್ಟುಕೊಂಡು ಆರೋಪಿ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ. ಅದರಿಂದ ಹೆದರಿದ ವೈದ್ಯ ಸುಮಾರು 70 ಸಾವಿರ ರೂ.ಅನ್ನು ಆತನ ಖಾತೆಗೆ ವರ್ಗಾವಣೆ ಮಾಡಿಕೊಂಡಿದ್ದಾನೆ. ಆದರೂ ಇನ್ನಷ್ಟು ಹಣಕ್ಕೆ ಬೇಡಿಕೆ ಇಟ್ಟಾಗ ಹೆದರಿದ ವೈದ್ಯ ಮೂರು ತಿಂಗಳ ಹಿಂದೆ ಕೆಂಗೇರಿ ರೈಲ್ವೆ ನಿಲ್ದಾಣ ಸಮೀಪದಲ್ಲಿ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ರೈಲ್ವೆ ವಿಭಾಗದ ಪೊಲೀಸರು ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next