Advertisement

ಹಾಂಕಾಂಗ್‌: 200 ಮಂದಿ ಬಂಧನ

02:35 AM Jul 02, 2020 | Hari Prasad |

ಹಾಂಕಾಂಗ್‌: ಹಾಂಕಾಂಗ್‌ನಲ್ಲಿ ಜುಲೈ 1ರಿಂದ ನೂತನ ರಾಷ್ಟ್ರೀಯ ಭದ್ರತಾ ಕಾನೂನು ಜಾರಿಯಾಗಿದ್ದು, ಮೊದಲ ದಿನವೇ ಸ್ಥಳೀಯರಿಂದ ಭಾರೀ ವಿರೋಧ ವ್ಯಕ್ತವಾಗಿದೆ.

Advertisement

ಕಾನೂನು ವಿರೋಧಿಸಿ ಸಾವಿರಾರು ಸಂಖ್ಯೆಯಲ್ಲಿ ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದರು.
ಪ್ರತಿಭಟನಕಾರರನ್ನು ನಿಯಂತ್ರಿಸಲು ಪೊಲೀಸರು ಜಲಫಿರಂಗಿ ಹಾಗೂ ಅಶ್ರುವಾಯು ಸಿಡಿಸಿದರು.

200ಕ್ಕೂ ಹೆಚ್ಚು ಪ್ರತಿಭಟನಕಾರರನ್ನು ಬಂಧಿಸಲಾಗಿದೆ.

ಹಾಂಕಾಂಗ್‌ ರಾಷ್ಟ್ರೀಯ ಭದ್ರತಾ ಕಾನೂನನ್ನು ಚೀನದ ಉನ್ನತ ಶಾಸಕಾಂಗ, ರಾಷ್ಟ್ರೀಯ ಪೀಪಲ್ಸ್‌ ಕಾಂಗ್ರೆಸ್‌ನ ಸ್ಥಾಯಿ ಸಮಿತಿ ಮಂಗಳವಾರ ಸರ್ವಾನುಮತದಿಂದ ಅಂಗೀಕರಿಸಿದ್ದು, ಚೀನ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಸಹಿ ಹಾಕಿದ್ದಾರೆ.

ಈ ಮಧ್ಯೆ ಪ್ರತಿಭಟನೆಗಳು ಆರಂಭವಾಗುವುದಕ್ಕೂ ಮೊದಲು ಮಾತನಾಡಿದ ಹಾಂಕಾಂಗ್‌ನ ಮುಖ್ಯ ಕಾರ್ಯನಿರ್ವಾಹಕ ಕ್ಯಾರಿಲ್ಯಾಮ್‌ ಹಾಂಕಾಂಗ್‌ನ ಸ್ಥಿರತೆಯನ್ನು ಕಾಪಾಡಿಕೊಳ್ಳಲು ಈ ನಿರ್ಧಾರ ಅಗತ್ಯ ಹಾಗೂ ಸಮಯೋಚಿತ ಎಂದರು.

Advertisement

ಇದೇ ವೇಳೆ, ನೂತನ ಕಾನೂನನ್ನು ಹಲವು ಪಾಶ್ಚಿಮಾತ್ಯ ರಾಷ್ಟ್ರಗಳ ನಾಯಕರು, ಮಾನವ ಹಕ್ಕುಗಳ ಹೋರಾಟಗಾರರು ಖಂಡಿಸಿದ್ದಾರೆ. ಅಮೆರಿಕದ ವಿದೇಶಾಂಗ ಸಚಿವ ಮೈಕ್‌ ಪೊಂಪಿಯೋ ಮಾತನಾಡಿ, ಹಾಂಕಾಂಗ್‌ ಜನತೆಗೆ ಇದು ಅತ್ಯಂತ ದುಃಖದ ದಿನ ಎಂದಿದ್ದಾರೆ. ಅಲ್ಲದೆ ಸ್ಥಳೀಯ ಜನರ ಮೇಲೆ ದೌರ್ಜನ್ಯ ನಡೆಸುವುದರ ವಿರುದ್ಧ ಚೀನಕ್ಕೆ ಎಚ್ಚರಿಕೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next