Advertisement
ಬಂದ್ ನೇತೃತ್ವವಹಿಸಿದ್ದ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರನ್ನು ಮಧ್ಯಹಾ 12ಕ್ಕೆ ಖಾಸಗಿ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ಮಾಡುತ್ತಿರುವ ಸಂದರ್ಭದಲ್ಲಿ ಪೊಲೀಸರು ಬಂದ್ ಮಾಡುವಂತಿಲ್ಲ ಎನ್ನುವ ಕಾರಣ ನೀಡಿ ಶಾಸಕರು ಹಾಗೂ ಇತರ ಪ್ರತಿಭಟನಾಕಾರರನ್ನು ಬಂಧಿಸಿ ನಂತರ ಬಿಡುಗಡೆ ಮಾಡಿದರು.
ಕೆಎಸ್ಸಾರ್ಟಿಸಿ ಬಸ್‌ಗಳು ಎಂದಿನಂತೆ ಸಂಚಾರ ಮಾಡಿದವು. ಈ ಸಂದರ್ಭದಲ್ಲಿ ಶಾಸಕ ಎಂ.ಪಿ.ರೇಣುಕಾಚಾರ್ಯ ಮಾತನಾಡಿ, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ
ತಾವು ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ ರೈತರ ಸಾಲ ಮನ್ನಾ ಮಾಡುತ್ತೇನೆ ಎಂದು ಹೇಳಿದ್ದರು. ಮಾತಿನಂತೆ ಅವರು ನಡೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
Related Articles
ಸಕಾರವಾಗಿರಲಿ ಅಥವಾ ಒಂದೇ ಪಕ್ಷದ ಆಡಳಿತವಿರಲಿ ಒಟ್ಟಿನಲ್ಲಿ ಎಚ್‌ಡಿಕೆ ಮುಖ್ಯಮಂತ್ರಿಯಾಗಿದ್ದಾರೆ. ಅವರು ಮಾತಿನಂತೆ ರೈತರ ಸಾಲ ಮನ್ನಾ ಮಾಡಲಿ ಎಂದರು. ತಹಶೀಲ್ದಾರ್ ತುಷಾರ್ ಬಿ. ಹೊಸೂರು ಅವರಿಗೆ ಮನವಿ
ಸಲ್ಲಿಸಿದ್ದರು.
Advertisement
ಬಿಜೆಪಿ ಕಾರ್ಯಕರ್ತರು ಬೈಕ್ ರ್ಯಾಲಿಯೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನೆ ನಡೆಸಿದರು. ಬಂದ್ ಹಿನ್ನಲೆಯಲ್ಲಿ ವ್ಯಾಪಕ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
ತಾಲೂಕು ಬಿಜೆಪಿ ಅಧ್ಯಕ್ಷ ಡಿ.ಜಿ. ರಾಜಪ್ಪ, ಜಿಪಂ ಸದಸ್ಯರಾದ ಎಂ.ಆರ್. ಮಹೇಶ್, ಉಮಾ ರಮೇಶ್, ದೀಪಾ ಜಗದೀಶ್, ವೀರಶೇಖರಪ್ಪ, ಸುರೇಂದ್ರನಾಯ್ಕ, ತಾಪಂ ಉಪಾಧ್ಯಕ್ಷ ಸಿ.ಆರ್. ಶಿವಾನಂದ್ ಇತರರು ಪಾಲ್ಗೊಂಡಿದ್ದರು.