Advertisement

ಗ್ರಾಮೀಣ ಜನರಲ್ಲಿ ಕೋವಿಡ್ ಜಾಗೃತಿ ಮೂಡಲಿ: ರೇಣು

11:57 AM Jun 29, 2020 | Naveen |

ಹೊನ್ನಾಳಿ: ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಕೋವಿಡ್ ವೈರಸ್‌ ಈಗ ಹಳ್ಳಿಗಳಿಗೂ ಹಬ್ಬುತ್ತಿದೆ. ಆದ್ದರಿಂದ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಮುಖ್ಯಮಂತ್ರಿಗಳ ರಾಜಕೀಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.

Advertisement

ತಾಲೂಕಿನ ಹತ್ತೂರು ಗ್ರಾಮದ ಗ್ರಾಮಸ್ಥರಿಗೆ ಭಾನುವಾರ ಮಾಸ್ಕ್ ವಿತರಿಸಿ ಅವರು ಮಾತನಾಡಿದರು. ಹೊನ್ನಾಳಿ ತಾಲೂಕಿನ ಹತ್ತೂರು ಗ್ರಾಮದಲ್ಲಿ ಒಂದು, ಕ್ಯಾಸಿನಕೆರೆ ಗ್ರಾಮದಲ್ಲಿ ಎರಡು ಹಾಗೂ ನ್ಯಾಮತಿ ತಾಲೂಕಿನ ದೊಡ್ಡೇರಿ ಗ್ರಾಮದಲ್ಲಿ ಒಂದು ಕೋವಿಡ್ ಪ್ರಕರಣಗಳು ಕಂಡು ಬಂದಿದೆ. ಆದ್ದರಿಂದ ನಾನು ಪ್ರತಿ ಹಳ್ಳಿಗೂ ಭೇಟಿ ನೀಡಿ ಮಾಸ್ಕ್ ವಿತರಿಸುತ್ತಿದ್ದೇನೆ ಎಂದರು.

ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ನಿತ್ಯದ ಕೆಲಸ ಕಾರ್ಯಗಳನ್ನು ಮಾಡಬೇಕು. ತಪ್ಪಿದಲ್ಲಿ ಅನಾಹುತ ಗ್ಯಾರಂಟಿ. ನಾನು ಹಳ್ಳಿಗಳಿಗೆ ಭೇಟಿ ನೀಡಿದಾಗ ಸಾಮಾಜಿಕ ಅಂತರ ಕಾಪಾಡಿಕೊಂಡ ನಂತರವೇ ಮಾಸ್ಕ್ ವಿತರಿಸುವ ಕಾರ್ಯ ಮಾಡುತ್ತಿದ್ದೇನೆ. ಅನೇಕ ಜನರು ತಮ್ಮ ಕೆಲಸಗಳನ್ನು ಮಾಡಿಸಿಕೊಳ್ಳಲು ಹೊನ್ನಾಳಿಯ ನಮ್ಮ ನಿವಾಸಕ್ಕೆ ಗುಂಪಾಗಿ ಬರುತ್ತಿದ್ದಾರೆ. ಈ ರೀತಿ ಬಂದವರಿಗೆ ಬೈಯ್ದು ಬುದ್ಧಿ ಹೇಳಿದ್ದೇನೆ. ಆದರೂ ಜನರು ಕೇಳುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ತಹಶೀಲ್ದಾರ್‌ ತುಷಾರ್‌ ಬಿ. ಹೊಸೂರು, ತಾಲೂಕು ವೈದ್ಯಾಧಿಕಾರಿ ಡಾ| ಕೆಂಚಪ್ಪ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next