Advertisement

ಕರ್ತವ್ಯ ನಿರ್ವಹಣೆಗೆ ಅಡ್ಡಿ: ಕಠಿಣ ಕ್ರಮಕ್ಕೆ ಮನವಿ

05:54 PM Apr 24, 2020 | Naveen |

ಹೊನ್ನಾಳಿ: ಸರ್ಕಾರಿ ಸೇವೆ ಸಲ್ಲಿಸುತ್ತಿರುವ ಆರೋಗ್ಯ ಸಿಬ್ಬಂದಿಗಳು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಪೊಲೀಸರು ಮತ್ತು ಸರ್ಕಾರಿ ನೌಕರರು ಯಾರೇ ಆಗಲಿ ಅವರು ಕರ್ತವ್ಯ ನಿರ್ವಹಿಸದಂತೆ ಅಡ್ಡಿಪಡಿಸುವ, ಹಲ್ಲೆ ಮಾಡುವವರ ಮೇಲೆ ಕಠಿಣ ಶಿಕ್ಷೆ ವಿಧಿಸುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡುವಿದಾಗಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.

Advertisement

ಗುರುವಾರ ಪಪಂ ಆವರಣದಲ್ಲಿ ತಾಲೂಕು ಪತ್ರಿಕಾ ವಿತರಕರಿಗೆ, ಆಶಾ ಕಾರ್ಯಕರ್ತೆಯರಿಗೆ ಹಾಗೂ ಸಿಂಪಿ ಸಮಾಜದ ಟೈಲರ್‌ವೃತ್ತಿ ಮಾಡುವವರಿಗೆ ಆಹಾರ ಕಿಟ್‌ ವಿತರಿಸಿ ಅವರು ಮಾತನಾಡಿದರು. ಪೊಲೀಸರು ಕರ್ತವ್ಯ ನಿರ್ವಹಿಸುವಾಗ ಅಡ್ಡಿಪಡಿಸಿದಲ್ಲಿ ಅಂಥವರ ಮೇಲೆ ಲಾಠಿಚಾರ್ಜ್‌ ಬದಲು ಗುಂಡಿನ ಸುರಿಮಳೆಗೈಯ್ಯಬೇಕು ಎಂದರು. ಆಹಾರ ಕಿಟ್‌ ಪಡೆದುಕೊಳ್ಳುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಆದರೂ ಅವರೆಲ್ಲರಿಗೂ ತಾವು ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಮೇ 3 ರವರೆಗೂ ಮುಂದುವರೆಸುವುದಾಗಿ ಪ್ರಕಟಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next