Advertisement

ಅಕ್ರಮ ದಾಸ್ತಾನು: ಹತ್ತಿ ಬಿತ್ತನೆ ಬೀಜ ವಶ

03:12 PM Apr 27, 2020 | Naveen |

ಹೊನ್ನಾಳಿ: ತಾಲೂಕಿನ ಬೇಲಿಮಲ್ಲೂರು ಗ್ರಾಮದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿಕೊಂಡು ಮಾರಾಟ ಮಾಡುತ್ತಿದ್ದ ಹತ್ತಿ ಬಿತ್ತನೆ ಬೀಜಗಳನ್ನು ಕೃಷಿ ಇಲಾಖೆ ಅಧಿಕಾರಿಗಳು ಭಾನುವಾರ ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ.

Advertisement

ಉಪ ಕೃಷಿ ನಿರ್ದೇಶಕಿ ಹಂಸವೇಣಿ, ಸಹಾಯಕ ಕೃಷಿ ನಿರ್ದೇಶಕ ಸುರೇಶ್‌ ನೇತೃತ್ವದಲ್ಲಿ ಗ್ರಾಮದ ಎಂ.ಆರ್‌. ವೀರಭದ್ರಪ್ಪ ಎಂಬುವವರ ಮನೆ ಮೇಲೆ ದಾಳಿ ನಡೆಸಲಾಯಿತು. ಅನಧಿಕೃತವಾಗಿ ದಾಸ್ತಾನಿಟ್ಟು ಮಾರಾಟ ಮಾಡುತ್ತಿದ್ದ 36 ಅಂಕುರ್‌ ತಳಿಯ ಹತ್ತಿ ಬಿತ್ತನೆ ಬೀಜಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೊನ್ನಾಳಿ, ನ್ಯಾಮತಿ ತಾಲೂಕುಗಳಲ್ಲಿ ಮುಂಗಾರು ಹಂಗಾಮಿನಲ್ಲಿ ನಕಲಿ ಬಿತ್ತನೆ ಬೀಜ ಹಾಗೂ ಲೂಜ್‌ ಮೆಕ್ಕೆಜೋಳ ಬಿತ್ತನೆ ಬೀಜದ ಹಾವಳಿ ಇರುವುದು ಗಮನಕ್ಕೆ ಬಂದಿತ್ತು. ಇದನ್ನು ತಡೆಗಟ್ಟಲು ಉಪ ಕೃಷಿ ನಿರ್ದೇಶಕರು, ಸಹಾಯಕ ಕೃಷಿ ನಿರ್ದೇಶಕರು, ಕೃಷಿ ಅ ಧಿಕಾರಿಗಳನ್ನೊಳಗೊಂಡ ತಂಡಗಳನ್ನು ರಚಿಸಲಾಗಿದೆ ಎಂದು ಉಪ ಕೃಷಿ ನಿರ್ದೇಶಕಿ ಹಂಸವೇಣಿ ತಿಳಿಸಿದರು.

ನಕಲಿ ಬಿತ್ತನೆ ಬೀಜ ಹಾಗೂ ಲೂಜ್‌ ಮೆಕ್ಕೆಜೋಳ ಬಿತ್ತನೆ ಬೀಜ ಮಾರಾಟ ಕಂಡುಬಂದಲ್ಲಿ ತಕ್ಷಣ ಕೃಷಿ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ರೈತರು ಬಿತ್ತನೆ ಬೀಜಗಳನ್ನು ರಿಯಾಯ್ತಿ ದರದಲ್ಲಿ ಅಗತ್ಯ ದಾಖಲೆಗಳನ್ನು ನೀಡಿ ಸ್ಥಳೀಯ ರೈತ ಸಂಪರ್ಕ ಕೇಂದ್ರಗಳಿಂದ ಪಡೆಯಬೇಕು. ಮುಂಗಾರು ಹಂಗಾಮಿಗೆ ಕೃಷಿ ಇಲಾಖೆಯಿಂದ ಬಿತ್ತನೆ ಬೀಜ ಹಾಗೂ ರಸಗೊಬ್ಬರದ ಕೊರತೆ ಆಗದಂತೆ ಎಚ್ಚರ ವಹಿಸಲಾಗುತ್ತಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next