Advertisement

ಅಭ್ಯರ್ಥಿಗಳಿಂದ ಅಬ್ಬರದ ಪ್ರಚಾರ ಶುರು

12:29 PM Apr 08, 2019 | Naveen |

ಹೊನ್ನಾಳಿ: ಒಂದು ಲಕ್ಷಕ್ಕೂ ಹೆಚ್ಚು ಮತಗಳಿಂದ ಗೆಲುವು ಸಾಧಿ ಸುತ್ತೇವೆ ಎಂದು ಬೀಗುತ್ತಿರುವ ಬಿಜೆಪಿಯವರಿಗೆ ಫಲಿತಾಂಶದ ದಿನ ಬಿಗ್‌ ಶಾಕ್‌ ಸಿಗಲಿದೆ ಎಂದು ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ಎಚ್‌.ಬಿ. ಮಂಜಪ್ಪ ಟಾಂಗ್‌ ನೀಡಿದರು.

Advertisement

ಭಾನುವಾರ ತಾಲೂಕಿನ ಗಡಿ ಭಾಗದ ಮುಕ್ತೇನಹಳ್ಳಿ ಗ್ರಾಮದ ದುರ್ಗಾಂಬಿಕಾ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ಸಾರ್ವಜನಿಕರನ್ನುದ್ದೇಶಿಸಿ ಅವರು ಮಾತನಾಡಿದರು.

ಪ್ರಥಮ ಬಾರಿಗೆ ಕಾಂಗ್ರೆಸ್‌ ಪಕ್ಷ ನನಗೆ ಲೋಕಸಭೆಗೆ ಸ್ಪರ್ಧಿಸಲು ಟಿಕೆಟ್‌ ನೀಡಿದೆ. ನಾನು ಚುನಾವಣೆಯಲ್ಲಿ 50 ಸಾವಿರಕ್ಕೂ ಹೆಚ್ಚು
ಮತಗಳಿಂದ ಗೆಲುವು ಸಾಧಿ ಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಾವು ಹಣ ಬಲದಿಂದ ಗೆಲುವು ಸಾಧಿಸುತ್ತೇವೆ
ಎಂದು ಬಿಜೆಪಿಯವರು ಹೇಳುತ್ತಾರೆ. ಆದರೆ ನಾವು ಕಾಂಗ್ರೆಸ್‌ನವರು ಜನಬಲದಿಂದ ಜಯ ಸಾಧಿಸುತ್ತೇವೆ. ನಿಮ್ಮ ಮಗನೆಂದು ನನಗೆ ಮತ ಹಾಕಿ. ಜಾತಿ ನೋಡಿ ಮತ ಹಾಕದಿರಿ ಎಂದು ಮನವಿ ಮಾಡಿದರು. ರಾಜ್ಯ ಹಾಗೂ ದೇಶದಲ್ಲಿ ಬಿಜೆಪಿ ಅಭ್ಯರ್ಥಿಗಳು ತಮ್ಮ ಅಭಿವೃದ್ಧಿ ಕಾರ್ಯಕ್ರಮದ ಮೇಲೆ ಮತ ಕೇಳದೆ ಪ್ರಧಾನಿ ನರೇಂದ್ರ ಮೋದಿ ಮುಖ ನೋಡಿ ನಮಗೆ ಮತ ಹಾಕಿ ಎಂದು ಕೇಳುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಟೀಕಿಸಿದರು.

ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ, ಮಾಜಿ ಸಿಎಂ ಸಿದ್ದರಾಮಯ್ಯ, ಶಾಸಕ ಶಾಮನೂರು ಶಿವಶಂಕರಪ್ಪ, ಮಾಜಿ ಸಚಿವ ಮಲ್ಲಕಾರ್ಜುನ ನನ್ನ ಮೇಲೆ ವಿಶ್ವಾಸವಿಟ್ಟು ಟಿಕೆಟ್‌ ನೀಡಿದ್ದಾರೆ.
ಲೋಕಸಭಾ ಚುನಾವಣೆ ಫಲಿತಾಂಶ ಮುಂದಿನ ದಿನಗಳಲ್ಲಿ ನಡೆಯುವ ಇತರೆ ಚುನಾವಣೆಗಳ ಮೇಲೆ ಪರಿಣಾಮ ಬೀರುತ್ತದೆ. ನನ್ನನ್ನು ಜಯಶೀಲನನ್ನಾಗಿ ಮಾಡಿದರೆ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಹೇಳಿದರು.

Advertisement

ಮಾಜಿ ಶಾಸಕ ಡಿ.ಜಿ. ಶಾಂತನಗೌಡ ಮಾತನಾಡಿ, ಸುಳ್ಳು ಭರವಸೆಗಳನ್ನು ಕೊಡುತ್ತಿರುವ ನರೇಂದ್ರ ಮೋದಿಯವರನ್ನು ಯಾವ ಕಾರಣಕ್ಕೂ ನಂಬಬೇಡಿ. ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಕಾಂಗ್ರೆಸ್‌ಗೆ ತನ್ನದೇ ಆದ ಇತಿಹಾಸವಿದೆ ಎಂದು ನುಡಿದರು.

ಪ್ರತಿಯೊಬ್ಬ ಕಾಂಗ್ರೆಸ್‌ ಕಾರ್ಯಕರ್ತ ತಾನೇ ಲೋಕಸಭಾ ಅಭ್ಯರ್ಥಿ ಎಂದು ತಿಳಿದು ಗ್ರಾಮಾಂತರ ಪ್ರದೇಶಗಳಲ್ಲಿ ಪ್ರಚಾರ ಮಾಡಿ ಎಚ್‌.ಬಿ.ಮಂಜಪ್ಪ ಅವರನ್ನು ಗೆಲ್ಲಿಸಬೇಕು ಎಂದು ಹೇಳಿದರು.

ಜಿ.ಪಂ ಸದಸ್ಯ ಡಿ.ಜಿ. ವಿಶ್ವನಾಥ್‌, ಸಾಸ್ವೆಹಳ್ಳಿ ಮತ್ತು ಹೊನ್ನಾಳಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾದ ಎಚ್‌.ಎ. ಗದ್ದಿಗೇಶ್‌, ಸಣ್ಣಕ್ಕಿ ಬಸವನಗೌಡ, ಜಿ.ಪಂ ಮಾಜಿ ಅಧ್ಯಕ್ಷ ಆರ್‌.ನಾಗಪ್ಪ, ಮುಖಂಡರಾದ ಎಂ.ಸಿದ್ದಪ್ಪ, ಡಾ| ಈಶ್ವರನಾಯ್ಕ ಇತರರು ಮಾತನಾಡಿದರು. ಮಂಜಪ್ಪ ತಿಮ್ಮೇನಹಳ್ಳಿ, ಕುಂದೂರು, ಕುಂಬಳೂರು ಇತರ ಗ್ರಾಮಗಳಲ್ಲಿ ಮತಯಾಚನೆ ನಡೆಸಿದರು.

Advertisement

Udayavani is now on Telegram. Click here to join our channel and stay updated with the latest news.

Next