Advertisement

ಎಸ್ಸೆಸ್ಸೆಲ್ಸಿ ಪರೀಕ್ಷೆ ಎಚ್ಚರಿಕೆಯಿಂದ ನಡೆಸಿ: ರೇಣು

12:55 PM Jun 25, 2020 | Naveen |

ಹೊನ್ನಾಳಿ: ವಿದ್ಯಾರ್ಥಿ ಜೀವನದಲ್ಲಿ ಎಸ್ಸೆಸೆಲ್ಸಿ ಪರೀಕ್ಷೆ ಬಹಳ ಪ್ರಮುಖವಾದ ಘಟ್ಟ. ಈ ಬಾರಿ ಪರೀಕ್ಷೆಯನ್ನು ಎಚ್ಚರಿಕೆಯಿಂದ ನಡೆಸಬೇಕಿದೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದರು.

Advertisement

ಪಟ್ಟಣದ ಗುರುಭವನದಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷಾ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಮಾಸ್ಕ್ ಗಳನ್ನು ವಿತರಿಸಿ ಅವರು ಮಾತನಾಡಿದರು. ಏಪ್ರಿಲ್‌ ತಿಂಗಳಲ್ಲಿ ನಡೆಯಬೇಕಾಗಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆ ಕೋವಿಡ್ ಸೋಂಕಿನಿಂದ ಎರಡು ತಿಂಗಳು ಮುಂದಕ್ಕೆ ಹಾಕಲಾಯಿತು. ಈಗಲೂ ನಮ್ಮಿಂದ ಭಯ ದೂರವಾಗಿಲ್ಲ. ಆದರೂ ಪರೀಕ್ಷೆಯನ್ನು ನಡೆಸಲೇಬೇಕಾದ ಒತ್ತಡದಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದೆ. ಅದಕ್ಕಾಗಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡಿದೆ. ಶಿಕ್ಷಣ ಇಲಾಖೆ ಎಚ್ಚರಿಕೆಯಿಂದ ಯಶಸ್ವೀಯಾಗಿ ಪರೀಕ್ಷೆಗಳನ್ನು ಮುಗಿಸಿಕೊಡಬೇಕು. ಯಾವುದೇ ಅಪಸ್ವರಗಳು ಕೇಳಿಬರಬಾರದು ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಇ. ರಾಜೀವ್‌ ಮಾತನಾಡಿ, ಹೊನ್ನಾಳಿ ಬ್ಲಾಕ್‌ ನಲ್ಲಿ 10 ಪರೀಕ್ಷಾ ಕೇಂದ್ರಗಳು ಮತ್ತು 2 ಉಪ ಕೇಂದ್ರಗಳಿವೆ. ಹೊಸದಾಗಿ 1238 ಬಾಲಕರು, 1463 ಬಾಲಕಿಯರು ಸೇರಿ ಒಟ್ಟು 2701 ಹಾಗೂ ಪುನರಾವರ್ತಿತ ವಿದ್ಯಾರ್ಥಿಗಳು 150, ವಲಸೆ ಬಂದವರು 95 ಸೇರಿ ಒಟ್ಟು 2946 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ತಿಳಿಸಿದರು.

ವಿದ್ಯಾರ್ಥಿಗಳಿಗೆ ಸಾಮಾಜಿಕ ಅಂತರದಲ್ಲಿ ಆಸನ ಹಾಗೂ ಗ್ರಾಮೀಣ ವಿದ್ಯಾರ್ಥಿಗಳಿಗೆ ಬಸ್‌ ವ್ಯವಸ್ಥೆ ಮಾಡಲಾಗಿದೆ. ಕೋವಿಡ್  ವಾರಿಯರ್ಗಳನ್ನು ನೇಮಕ ಮಾಡಿಕೊಳ್ಳಲಾಗಿದೆ. ಪರೀಕ್ಷೆ ಬರೆಯುವವರಿಗೆ ಸೋಂಕು ನಿವಾರಕ ದ್ರಾವಣ ಸಿಂಪಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು. ತಾಪಂ ಪ್ರಭಾರಿ ಅಧ್ಯಕ್ಷ ಕೆ.ಎಲ್‌. ರಂಗಪ್ಪ, ಸದಸ್ಯ ಎಸ್‌.ಪಿ. ರವಿಕುಮಾರ್‌, ಎಪಿಎಂಸಿ ಅಧ್ಯಕ್ಷ ಸುರೇಶ್‌ ಮಾತನಾಡಿದರು. ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಚಂದ್ರಶೇಖರ್‌, ಮುಖ್ಯಶಿಕ್ಷಕ ಎಚ್‌. ತಿಪ್ಪೇಶಪ್ಪ, ಇಸಿಒ ಸಿದ್ದಪ್ಪ, ಬಸವರಾಜಪ್ಪ ಹಾಗೂ ಶಿಕ್ಷಕರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next