Advertisement

ಪ್ರತಿ ಹಳ್ಳಿಗೆ ತೆರಳಿ ಕೋವಿಡ್ ಜಾಗೃತಿ

04:47 PM Apr 18, 2020 | Naveen |

ಹೊನ್ನಾಳಿ: ಹೊನ್ನಾಳಿ, ನ್ಯಾಮತಿ ತಾಲೂಕುಗಳ ಜನತೆಯ ಹಿತರಕ್ಷಣೆ ನನಗೆ ಮುಖ್ಯವಾಗಿದ್ದು, ಕೋವಿಡ್ ವೈರಸ್‌ ಸೋಂಕು ತಡೆಗಟ್ಟಲು ಕಳೆದ ಒಂದು ತಿಂಗಳಿನಿಂದ ಕ್ಷೇತ್ರದ ಪ್ರತಿ ಹಳ್ಳಿಗೂ ತೆರಳಿ ಜಾಗೃತಿ ಮೂಡಿಸುತ್ತಿದ್ದೇನೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ, ರೇಣುಕಾಚಾರ್ಯ ಹೇಳಿದರು.

Advertisement

ನ್ಯಾಮತಿ ತಾಲೂಕು ದೊಡ್ಡೇರಿ ಗ್ರಾಮದಲ್ಲಿ ಶುಕ್ರವಾರ ಉದ್ಯೋಗ ಖಾತ್ರಿ ಯೋಜನೆಯಡಿ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಮುಖ್ಯಮಂತ್ರಿ ಯಡಿಯೂರಪ್ಪನವರು ಕೋವಿಡ್ ಸೋಂಕು ತಡೆಗಟ್ಟಲು ಅನೇಕ ಕ್ರಮಗಳನ್ನು ಜಾರಿಗೊಳಿಸಿದ್ದಾರೆ ಪ್ರಾರಂಭದಲ್ಲಿ ಸೋಂಕು ಪೀಡಿತರ ಸಂಖ್ಯೆಯಲ್ಲಿ 3ನೇ ಸ್ಥಾನದಲ್ಲಿತ್ತು ಕರ್ನಾಟಕ ಈಗ 11ನೇ ಸ್ಥಾನದಲ್ಲಿದೆ ಎಂದರು.

ಪ್ರಧಾನಿ ನರೇಂದ್ರ ಮೋದಿಯವರು ಎರಡನೇ ಹಂತದ ಲಾಕ್‌ಡೌನ್‌ ಘೋಷಿಸಿದ್ದಾರೆ. ಮನೆಯಿಂದ ಹೊರಗೆ ಬಾರದಂತೆ ವಿಧಿಸಿದ ಕಠಿಣ ಪರಿಸ್ಥಿತಿ ಬಡ ಜನತೆಗೆ ನುಂಗಲಾರದ ತುತ್ತಾಗಿದೆ. ಕೂಲಿ ಕಾರ್ಮಿಕರ ದುಡಿಯುವ ಕೈಗಳಿಗೆ ಕೆಲಸವಿಲ್ಲದೇ ದಿನನಿತ್ಯದ ಜೀವನ ನಡೆಸುವುದೇ ಕಷ್ಟವಾದ ಈ ಸಮಯದಲ್ಲಿ ಉದ್ಯೋಗ ಖಾತ್ರಿ ಕಾಮಗಾರಿಗಳನ್ನು ಸಮರೋಪಾದಿಯಲ್ಲಿ ಕೈಗೊಂಡು ನರೇಗಾ ಕಾರ್ಮಿಕರಿಗೆ ಉದ್ಯೋಗ ನೀಡುವಂತೆ ನಮ್ಮ ಸರ್ಕಾರ ಆದೇಶಿಸಿದೆ. ಕಾಮಗಾರಿ ಕೈಗೊಳ್ಳುವ ಸ್ಥಳದಲ್ಲಿ ಕೂಲಿ ಕಾರ್ಮಿಕರ ಹಿತರಕ್ಷಣೆಗಾಗಿ ಪ್ರಥಮ ಚಿಕಿತ್ಸಾ ಪೆಟ್ಟಿಗೆ, ಸರ್ಜಿಕಲ್‌ ಮಾಸ್ಕ್, ಸ್ಯಾನಿಟೈಸರ್‌, ಶುದ್ಧ ಕುಡಿಯುವ ನೀರು, ನೆರಳಿಗೆ ಶಾಮಿಯಾನ ವ್ಯವಸ್ಥೆ ಕಲ್ಪಿಸಲು ತಾಪಂ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next