Advertisement

ಹತ್ತೂರು ಗ್ರಾಮದ ನಿವಾಸಿಗೆ ಪಾಸಿಟಿವ್‌

07:03 PM Jun 26, 2020 | Naveen |

ಹೊನ್ನಾಳಿ: ತಾಲೂಕಿನ ಹತ್ತೂರು ಗ್ರಾಮದಲ್ಲಿ 34 ವರ್ಷದ ವ್ಯಕ್ತಿಯೊಬ್ಬರಿಗೆ ಕೋವಿಡ್ ಪಾಸಿಟಿವ್‌ ಬಂದಿದ್ದು, ಆ ವ್ಯಕ್ತಿಯನ್ನು ದಾವಣಗೆರೆ ಸಿಜಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

ಪಾಸಿಟಿವ್‌ ಬಂದ ವ್ಯಕ್ತಿ ಬೆಂಗಳೂರಿನಿಂದ ಆಗಮಿಸಿದ್ದು, ಜ್ವರದಿಂದ ಬಳಲುತ್ತಿದ್ದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಾಗೂ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಜ್ವರ ತೀವ್ರವಾದ ಕಾರಣ ಗಂಟಲಿನ ದ್ರವವನ್ನು ಪ್ರಯೋಗಾಲಯಕ್ಕೆ ಕಳಿಸಿದಾಗ ಮಂಗಳವಾರ ರಾತ್ರಿ ಫಲಿತಾಂಶ ಪಾಸಿಟಿವ್‌ ಬಂದಿದೆ ಎಂದು ಮೂಲಗಳು ತಿಳಿಸಿವೆ.

ವಿಷಯ ತಿಳಿದ ತಕ್ಷಣ ತಹಶೀಲ್ದಾರ್‌ ತುಷಾರ್‌ ಬಿ. ಹೊಸೂರು ಗ್ರಾಮಕ್ಕೆ ತೆರಳಿ ಕೋವಿಡ್ ಪಾಸಿಟಿವ್‌ ಬಂದ ವ್ಯಕ್ತಿಯ ಅಕ್ಕಪಕ್ಕದ 15 ಮನೆಗಳನ್ನು ಸೀಲ್‌ಡೌನ್‌ ಮಾಡಿಸಿದ್ದಾರೆ. ಕೋವಿಡ್  ಸೋಂಕಿತನ ತಂದೆ-ತಾಯಿಯನ್ನು ಹೊನ್ನಾಳಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಹತ್ತೂರು ಗ್ರಾಮದ ಎಲ್ಲಾ ಜನರನ್ನು ಪರೀಕ್ಷೆಗೊಳಪಡಿಸಲಾಗಿದೆ. ಪ್ರಾಥಮಿಕ ಹಂತವಾಗಿ ಗುಡ್ಡೇಹಳ್ಳಿ ಮತ್ತು ಜೀನಹಳ್ಳಿ ಗ್ರಾಮದ ಒಟ್ಟು 12 ಜನರನ್ನು ಕ್ವಾರಂಟೈನ್‌ನಲ್ಲಿಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next