Advertisement

79 ಪರೀಕ್ಷಾ ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ: ಡಿಡಿಪಿಐ ಪರಮೇಶ್ವರ

07:10 PM Jun 01, 2020 | Naveen |

ಹೊನ್ನಾಳಿ: ಜಿಲ್ಲೆಯಲ್ಲಿ 20, 927 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲಿದ್ದಾರೆ ಎಂದು ಡಿಡಿಪಿಐ ಪರಮೇಶ್ವರಪ್ಪ ತಿಳಿಸಿದರು. ಪಟ್ಟಣದ ಹಳದಮ್ಮ ದೇವಿ ಬಾಲಕಿಯರ ಪ್ರೌಢಶಾಲೆಗೆ ಶನಿವಾರ ಭೇಟಿ ನೀಡಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

Advertisement

ಜಿಲ್ಲೆಯಲ್ಲಿ ಈಗಾಗಲೇ ಎಸ್ಸೆಸ್ಸೆಲ್ಸಿ ಪರೀಕ್ಷೆ ಬಗ್ಗೆ ವಿಡಿಯೋ ಕಾನ್ಫರೆನ್ಸ್‌ ನಡೆಸಲಾಗಿದೆ ಜೂನ್‌ 25 ರಿಂದ ಜುಲೈ 4 ರವರೆಗೆ ನಡೆಯುವ ಪರೀಕ್ಷೆಗೆ ಜಿಲ್ಲಾದ್ಯಂತ 79 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ ಎಂದರು. ಹೆಚ್ಚುವರಿಯಾಗಿ 14 ಬ್ಲಾಕ್‌ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಟಿವಿ ಅಳವಡಿಸಲಾಗಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಹಾಗೂ ಪರೀಕ್ಷಾ ಸಿಬ್ಬಂದಿಗೆ ಎರಡು ಮಾಸ್ಕ್ ಹಾಗೂ ಸ್ಯಾನಿಟೈಸರ್‌ ವ್ಯವಸ್ಥೆ ಮಾಡಲಾಗಿದೆ. ಒಂದು ಮಾಸ್ಕ್ ಶಿಕ್ಷಣ ಇಲಾಖೆ ನೀಡಿದರೆ, ಮತ್ತೊಂದನ್ನು ಜಿಲ್ಲಾ ಸ್ಕೌಟ್ಸ್‌ ಆ್ಯಂಡ್‌ ಗೈಡ್‌ನ‌ವರು ನೀಡಿದ್ದಾರೆ. ಪರೀಕ್ಷಾ ಕೊಠಡಿಯಲ್ಲಿ ಕೇವಲ 16 ರಿಂದ 20 ವಿದ್ಯಾರ್ಥಿಗಳಿಗೆ ಅವಕಾಶ ನೀಡಿದ್ದು ವಿದ್ಯಾರ್ಥಿಗಳನ್ನು ಒಂದು ಮೀಟರ್‌ ಅಂತರದಲ್ಲಿ ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಸಿಬ್ಬಂದಿಗೆ ಥರ್ಮಲ್‌ ಸ್ಕ್ಯಾನಿಂಗ್‌ ವ್ಯವಸ್ಥೆ ಕಲ್ಪಿಸಲಾಗಿದೆ. ಸಿಬ್ಬಂದಿ ಪರೀಕ್ಷೆಗಿಂತ ಒಂದು ಗಂಟೆ ಮುಂಚಿತವಾಗಿ ಬರಲಿದ್ದಾರೆ. ಪರೀಕ್ಷೆಗೆ ಬರುವ ವಿದ್ಯಾರ್ಥಿಗಳಿಗೆ ಉಚಿತ ಕೆಎಸ್‌ಆರ್‌ಟಿಸಿ ಬಸ್‌ ವ್ಯವಸ್ಥೆ ಮಾಡಲಾಗಿದೆ ಎಂದರು. ಇದೇ ಸಂದರ್ಭದಲ್ಲಿ ಎಸ್‌.ಎಸ್‌. ಮೊಂಜಿಲ್‌ ಉಚಿತ ಮನೆಪಾಠದ ಸಂಸ್ಥಾಪಕಿ ಷಹಜಾನ್‌ ಅವರು ಹೊನ್ನಾಳಿ ತಾಲೂಕಿನ 2900 ವಿದ್ಯಾರ್ಥಿಗಳಿಗೆ ಹಾಗೂ ಸಿಬ್ಬಂದಿಗೆ ಉಚಿತವಾಗಿ ಮಾಸ್ಕ್ ನೀಡುವುದಾಗಿ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next