ಹೊನ್ನಾವರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 206 ರ ಆರೋಳ್ಳಿ ಕ್ರಾಸ್‌ನಲ್ಲಿ ಸ್ಕಾರ್ಪಿಯೋ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಗುಡ್ಡಕ್ಕೆ ಢಿಕ್ಕಿಯಾಗಿ ಮೂವರು ಸಾವನ್ನಪ್ಪಿ , 8 ಮಂದಿ ಗಂಭೀರವಾಗಿ ಗಾಯಗೊಂಡ ಭೀಕರ ಅವಘಡ ಮಂಗಳವಾರ ನಸುಕಿಕ 2.30 ರ ವೇಳೆಗೆ ನಡೆದಿದೆ.
ಮೃತ ದುರ್ದೈವಿಗಳು ಸಾಗರ ತಾಲೂಕಿನ ಆನಂದಪುರ ನಿವಾಸಿಗಳಾಗಿದ್ದು , ಗೋವಾಕ್ಕೆ ಕಾರ್ಯಕ್ರಮವೊಂದಕ್ಕೆ ತೆರಳಿ ವಾಪಾಸಾಗುತ್ತಿದ್ದರು ಎನ್ನಲಾಗಿದೆ.
ಮೃತರನ್ನು ರುಬಿಯಾ(42), ಫಾತಿಮಾಬಿ(65)ಮತ್ತು ಬಾಬು ಸಾಬ್ (65) ಎಂದು ಗುರುತಿಸಲಾಗಿದೆ.
8 ಮಂದಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅತೀ ವೇಗದಲ್ಲಿ ಕಾರನ್ನು ಚಲಾಯಿಸಿದ್ದೇ ಅವಘಡಕ್ಕೆ ಕಾರಣ ಎಂದು ಎಫ್ಐಆರ್‌ನಲ್ಲಿ ದಾಖಲಾಗಿದೆ.
ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.