ಹೊನ್ನಾವರ: ಗೇರುಸೊಪ್ಪ ಸರ್ಕಲ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಗ್ಯಾಸ್ ಟ್ಯಾಂಕರೊಂದು ಪಲ್ಟಿಯಾಗಿದ್ದು, ಅನಿಲ ಸೋರಿಕೆಯಾಗಿರುವ ಬಗ್ಗೆ ಶಂಕೆ ವ್ಯಕ್ತವಾಗಿ ಆತಂಕಕ್ಕೆ ಕಾರಣವಾಯಿತು. ಸುಮಾರು 1 ಗಂಟೆಗಳ ಕಾಲ ಹೆದ್ದಾರಿಯಲ್ಲಿ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿತ್ತು.
ಟ್ಯಾಂಕರ್ ಪಲ್ಟಿಯಾದ ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ದೌಡಾಯಿಸಿ ದ ಪೊಲೀಸರು ಮತ್ತು ಅಗ್ನಿ ಶಾಮಕ ದಳದ ಸಿಬಂದಿಗಳು ಮುಂಜಾಗೃತಾ ಕೃಮ ಕೈಗೊಂಡರು . ಪೆಟ್ರೋಲ್ ಬಂಕ್ ಸಮೀಪದಲ್ಲೇ ಪಲ್ಟಿಯಾದ ಕಾರಣ ಸುತ್ತಮುತ್ತಲೂ ಸುರಕ್ಷಾ ಕ್ರಮಗಳನ್ನು ಕೈಗೊಂಡರು.
ಗಂಟೆಯ ಬಳಿಕ ಗ್ಯಾಸ್ ಸೋರಿಕೆ ಯಾಗಿಲ್ಲ ಎನ್ನುವುದು ಧೃಡಪಟ್ಟ ಬಳಿಕ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.
ಮಂಗಳೂರಿನಿಂದ ಅಂಕೋಲಾ ಕಡೆಗೆ ಟ್ಯಾಂಕರ್ ತೆರಳುತ್ತಿತ್ತು ಎಂದು ತಿಳಿದು ಬಂದಿದೆ.ಮಂಗಳೂರಿನಿಂದ ಅಧಿಕಾರಿಗಳು ತೆರಳುತ್ತಿದ್ದು ತೆರವು ಕಾರ್ಯಾಚರಣೆ ಪ್ರಗತಿಯಲ್ಲಿದೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.