Advertisement

Honnavara: ಭಾರೀ ಮಳೆ; ಹಲವು ಮನೆಗಳಿಗೆ ನೆರೆ ನೀರು

01:18 PM Jul 04, 2024 | Team Udayavani |

ಹೊನ್ನಾವರ: ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ತಾಲೂಕಿನ ಗುಂಡಬಾಳ ನದಿ ನೀರಿನ ಮಟ್ಟ ಏರಿಕೆಯಾದ ಪರಿಣಾಮ ಚಿಕ್ಕನಕೋಡ್ ಮತ್ತು ಹಡಿನಬಾಳ ಗ್ರಾಮದ ಹಲವು ಮನೆಗಳಿಗೆ ನೀರು ನುಗ್ಗಿ ಆತಂಕ ಸೃಷ್ಟಿಯಾಗಿದೆ.

Advertisement

ಪ್ರಸುತ್ತ ವರ್ದಲ್ಲಿ ಇದೆ ಮೊದಲ ಬಾರಿಗೆ ಗುಂಡಬಾಳ ನದಿಯಲ್ಲಿ ನೆರೆ ಪ್ರವಾಹದಿಂದಾಗಿ ಚಿಕ್ಕನಕೋಡ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಹರಿಜನಕೇರಿ, ಹಿತ್ತಲಕೇರಿ, ಹಡಿನಬಾಳ ಭಾಗದ ಕಡಗೇರಿ ಭಾಗದಲ್ಲಿ ಮನೆಗಳಿಗೆ ನೀರು ನುಗ್ಗಿದೆ. ‌

ಮುನ್ನೆಚ್ಚರಿಕೆಯಾಗಿ ನಿವಾಸಿಗಳನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರ ಮಾಡುವತ್ತ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿದ್ದಾರೆ.

ಜಿಲ್ಲಾಧಿಕಾರಿ ಸೂಚನೆಯಂತೆ ತಾಲೂಕಿನ ನದಿ ಪಾತ್ರದ ಕೆಲ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next