ಕೆಜಿಎಫ್: ತಾಲೂಕಿನ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಶಿಕ್ಷಕರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಆರ್.ಅಶೋಕ್‌ರ ಅಧ್ಯಕ್ಷತೆಯಲ್ಲಿ ಸನ್ಮಾನಿಸಲಾಯಿತು.
ಶುಕ್ರವಾರ ಉರಿಗಾಂಪೇಟೆ ಕ್ಲಸ್ಟರ್‌ನ ಯರನಾಗನಹಳ್ಳಿ ಸರ್ಕಾರಿ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಕ್ರೀಡಾಕೂಟದಿಂದ ರಾಷ್ಟ್ರೀಯಮಟ್ಟಕ್ಕೆ ಆಯ್ಕೆಗೊಂಡಿರುವ ಕಬಡ್ಡಿಯಲ್ಲಿ ಶಿಕ್ಷಕ ಎಚ್.ಆರ್.ರವಿ, ಬಾಲ್ ಬ್ಯಾಡ್ಮಿಂಟನ್‌ನಲ್ಲಿ ಶಿಕ್ಷಕಿ ಯಶೋಧಮ್ಮ,
ಸುಷ್ಮಾ, ಕ್ರಿಕೆಟ್‌ನಲ್ಲಿ ವೆಂಕಟಾಚಲಪತಿ, ಪ್ರಶಾಂತ್ ಅವರನ್ನೊಳಗೊಂಡಂತೆ ಇನ್ಸ್‌ಪೆçರ್ ಅವಾರ್ಡ್‌ನಲ್ಲಿ ರಾಷ್ಟ್ರಮಟ್ಟದಲ್ಲಿ ಆಯ್ಕೆಯಾಗಿರುವ ವಿದ್ಯಾರ್ಥಿನಿ ಅನುಶ್ರೀ ಅವರನ್ನು ಬಿಇಒ ಅಶೋಕ್ ಸನ್ಮಾನಿಸಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಮನ್ವಯಾಧಿಕಾರಿ ಶಂಕರ್ ಕಾವಲಿ, ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷ ಅಪ್ಪಯ್ಯಗೌಡ, ಶಿಕ್ಷಕರಲ್ಲಿ ಸ್ಪರ್ಧಾ ಮನೋಭಾವ ಹೆಚ್ಚಾಗಬೇಕು ಎಂದು ತಿಳಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ್, ಗುಣಾತ್ಮಕ ಶಿಕ್ಷಣಕ್ಕೆ ಆದ್ಯತೆ ನೀಡುವ ಮೂಲಕ ಶಿಕ್ಷಕರ ಕರ್ತವ್ಯ ಅತಿ ಜವಾಬ್ದಾರಿಯಿಂದ ಕೂಡಿರಬೇಕು. ಮಕ್ಕಳ ಸುರಕ್ಷತೆ ಬಗ್ಗೆ ಹೆಚ್ಚು ಗಮನ ಹರಿಸಬೇಕು ಎಂದರು. ಇದೇ ವೇಳೆ ಪುಲ್ವಾಮಾದಲ್ಲಿ ಉಗ್ರರ ದಾಳಿಯಿಂದ ಮೃತಪಟ್ಟ ವೀರ ಯೋಧರಿಗೆ ಮೌನಾಚರಣೆ ನಡೆಸಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ, ಸಹ ಕಾರ್ಯದರ್ಶಿ ಮುನಿರತ್ನಂ, ಶಿಕ್ಷಕರಾದ ಬಿ.ಕೆ.ಚಂದ್ರಪ್ಪ, ಶಿಲ್ಲಾ, ಸಿಆರ್‌ಪಿ, ಬಿಆರ್‌ಪಿ, ಇಸಿಒ, ಶಿಕ್ಷಕರಿದ್ದರು.