Advertisement

ಗೂಂಡಾಗಿರಿ, ದೌರ್ಜನ್ಯ ನಿಯಂತ್ರಣ ಅಗತ್ಯ

12:54 PM May 09, 2018 | |

ಬೆಂಗಳೂರು: ಗೋವಿಂದರಾಜನಗರ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಅವರು ಮಂಗಳವಾರ ಎಸ್‌ವಿಜೆ ನಗರ, ಪಟ್ಟೇಗಾರಪಾಳ್ಯದಲ್ಲಿ ಪಾದಯಾತ್ರೆ ನಡೆಸಿ ಮತಯಾಚನೆ ಮಾಡಿದರು.

Advertisement

ಕ್ಷೇತ್ರದ ಬಿಜೆಪಿ ಪಾಲಿಕೆ ಸದಸ್ಯರು, ಮುಖಂಡರು ಹಾಗೂ ಕಾರ್ಯಕರ್ತರ ದಂಡಿನಿಂದಿಗೆ ಪಾದಯಾತ್ರೆ ನಡೆಸಿದ ಅವರು, ಕ್ಷೇತ್ರದಲ್ಲಿ ಗೂಂಡಾಗಿರಿ, ದೌರ್ಜನ್ಯ ಹೆಚ್ಚಾಗಿದ್ದು ಅದನ್ನು ನಿಯಂತ್ರಿಸಬೇಕಿದೆ. ಕ್ಷೇತ್ರದಲ್ಲಿ ಅಭಿವೃದ್ಧಿಗೆ ಹೊಸ ವೇಗ ಕಲ್ಪಿಸಬೇಕಾಗಿದೆ. ಹೀಗಾಗಿ  ಈ ಬಾರಿ ತಮಗೆ ಆಶೀರ್ವಾದ ಮಾಡುವಂತೆ ಮನವಿ ಮಾಡಿದರು.

 ಈ ಹಿಂದೆ ಬಿನ್ನಿಪೇಟೆ ಕ್ಷೇತ್ರದ ಶಾಸಕನಾಗಿ, ಸಚಿವನಾಗಿ ಇಡೀ ಬೆಂಗಳೂರಿನ ಅಭಿವೃದ್ಧಿಗೆ ಕ್ರಮ ಕೈಗೊಂಡಿದ್ದೇನೆ. ವಿಧಾನಪರಿಷತ್‌ ಸದಸ್ಯನಾಗಿ ಕ್ಷೇತ್ರದ ಜತೆ ನಿರಂತರ ಸಂಪರ್ಕ ಸಾಧಿಸಿ ಜನರ ಸಮಸ್ಯೆಗಳಿಗೆ ಸ್ಪಂದಿಸಿದ್ದೇನೆ. ಕ್ಷೇತ್ರದಲ್ಲಿ ಉದ್ಯಾನ ಅಭಿವೃದ್ಧಿ, ರಸ್ತೆ, ಕ್ರೀಡಾಂಗಣ ನಿರ್ಮಾಣ ಸೇರಿದಂತೆ ಮೂಲಸೌಕರ್ಯಗಳ ಅಭಿವೃದ್ಧಿಗೆ ಸಾಕಷ್ಟು ಕ್ರಮ ಕೈಗೊಂಡಿದ್ದೇನೆ ಎಂದು ಹೇಳಿದರು.

ಕೊಳೆಗೇರಿ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ, ಕೊಳೆಗೇರಿಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿ, ಬಡವರಿಗೆ ಮನೆ, ಆರೋಗ್ಯ ಸೇವೆ ಕಲ್ಪಿಸಿದ್ದೇನೆ. ನನ್ನ ಸೇವೆ ಗುರುತಿಸಿ ಎಂದು ಮನವಿ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next