ಜಮ್ಮು ಕಾಶ್ಮೀರ: 370ನೇ ವಿಧಿಯನ್ನು ರದ್ದುಗೊಳಿಸುವ ಕೇಂದ್ರದ ನಿರ್ಧಾರವೇ ಲಡಾಖ್‌ನ ವಾಸ್ತವ ನಿಯಂತ್ರಣ ರೇಖೆಯಲ್ಲಿ (ಎಲ್‌ಎಸಿ) ಚೀನಾದ ಆಕ್ರಮಣಕ್ಕೆ ಕಾರಣವಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ತಿಳಿಸಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿದ ಫಾರೂಕ್ ಅಬ್ದುಲ್ಲಾ, 370 ನೇ ವಿಧಿಯನ್ನು ರದ್ದುಪಡಿಸುವುದನ್ನು ಚೀನಾ ಎಂದಿಗೂ ಒಪ್ಪಿಕೊಂಡಿಲ್ಲ ಮತ್ತು ಚೀನಾದ ಬೆಂಬಲದೊಂದಿಗೆ ಅದನ್ನು ಪುನಃಸ್ಥಾಪಿಸಲಾಗುವುದು ಎಂದು ಆಶಿಸಿದರು.
ವಾಸ್ತವ ನಿಯಂತ್ರಣ ರೇಖೆಯಲ್ಲಿ ಚೀನಾ ಪದೇ ಪದೇ ಕಾಣಿಸಿಕೊಳ್ಳುತ್ತಿರುವುದಕ್ಕೆ 370 ನೇ ವಿಧಿಯನ್ನು ರದ್ದುಪಡಿಸಿದ್ದು ಕಾರಣ. ಜಮ್ಮು ಕಾಶ್ಮೀರದಲ್ಲಿ ಚೀನಾದ ಬೆಂಬಲದೊಂದಿಗೆ ಆರ್ಟಿಕಲ್ 370 ಯನ್ನು ಪುನರ್ ಸ್ಥಾಪಿಸಲಾಗುವುದು ಎಂದು ತಿಳಿಸಿದ್ದಾರೆ.
ನಾನು ಚೀನಾದ ಅಧ್ಯಕ್ಷರನ್ನು ಎಂದಿಗೂ ಆಹ್ವಾನಿಸಲಿಲ್ಲ. ಆದರೇ ಮೋದಿ ಅವರನ್ನು ಆಹ್ವಾನಿಸಿದ್ದು ಮಾತ್ರವಲ್ಲದೆ ಅವರೊಂದಿಗೆ ಸವಾರಿಯನ್ನು ಮಾಡಿದ್ದಾರೆ. ಮಾತ್ರವಲ್ಲದೆ ಅವರನ್ನು ಚೆನ್ನೈಗೆ ಕರೆದೊಯ್ದು ಅವರೊಂದಿಗೆ ಆಹಾರ ಸೇವಿಸಿದ್ದಾರೆ ಎಂದು ಫಾರೂಕ್ ಅಬ್ದುಲ್ಲಾ ಹೇಳಿದರು.
ಆಗಸ್ಟ್ 5 , 2019 ರಂದು ಸರ್ಕಾರ ತೆಗೆದುಕೊಂಡ ನಿರ್ಧಾರ ಸ್ವೀಕಾರಾರ್ಹವಲ್ಲ. ಸಂಸತ್ತಿನಲ್ಲಿ ಜಮ್ಮು ಮತ್ತು ಕಾಶ್ಮೀರದ ಸಮಸ್ಯೆಗಳ ಕುರಿತು ಮಾತನಾಡಲು ಕೂಡ ನನಗೆ ಅವಕಾಶ ನೀಡಲಿಲ್ಲ ಎಂದು ಅವರು ಹೇಳಿದರು.
ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370ನೇ ವಿಧೀಯನ್ನು ರದ್ದುಗೊಳಿಸಿದ ನಂತರ ಪ್ರಮುಖ ನಾಯಕರಾದ ಫಾರೂಕ್ ಅಬ್ದುಲ್ಲಾ, ಒಮರ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ ಮುಂತಾದವರನ್ನು ಭದ್ರತೆಯ ಕಾರಣದಿಂದ ಗೃಹ ಬಂಧನಕ್ಕೆ ಒಳಪಡಿಸಲಾಗಿತ್ತು.