Advertisement

ಶೋಷಿತರ ಆಶಾಕಿರಣ ಅರಸು ಜನ್ಮ ದಿನಾಚರಣೆ

09:54 PM Aug 20, 2019 | Team Udayavani |

ಸಾಮಾಜಿಕ ನ್ಯಾಯದ ಹರಿಕಾರ, ಹಿಂದುಳಿದ ವರ್ಗಗಳ ಆಶಾಕಿರಣ, ಭೂ ಸುಧಾರಣೆ ಕಾಯ್ದೆ ಜಾರಿಗೊಳಿಸಿದ ಮಹನೀಯ ಎಂದೇ ಕರೆಯಲ್ಪಡುವ ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಜಯಂತಿಯನ್ನು ಜಿಲ್ಲಾದ್ಯಂತ ಆಚರಿಸಲಾಯಿತು. ಅರಸು ಜಾರಿಗೆ ತಂದಿದ್ದ ಸುಧಾರಣೆ ಕ್ರಮಗಳನ್ನು ಮೆಲುಕು ಹಾಕಿದ ಗಣ್ಯರು, ಅವರ ಆದರ್ಶ ಪಾಲಿಸಲು ಸಲಹೆ ನೀಡಿದರು.

Advertisement

ಚಿಕ್ಕಬಳ್ಳಾಪುರ: ಮಾಜಿ ಸಿಎಂ ದಿ.ಡಿ.ದೇವರಾಜ ಅರಸು ಅವರು, ಸಮಾಜದಲ್ಲಿನ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಕಲ್ಪಿಸಿದ ಸಾಮಾಜಿಕ ಹರಿಕಾರರಾಗಿದ್ದು, ಅವರ ಆದರ್ಶಗಳನ್ನು ವೃತ್ತಿ ಜೀವನದಲ್ಲಿ ಪ್ರತಿಯೊಬ್ಬರು ರೂಢಿಸಿಕೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಆರತಿ ಆನಂದ್‌ ತಿಳಿಸಿದರು.

ನಗರದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ದಿ.ದೇವರಾಜ ಅರಸು ಅವರ 104ನೇ ಜನ್ಮ ಜಯಂತಿಯಲ್ಲಿ ಅರಸು ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು. ಅರಸು ಜಯಂತಿ ಕಾರ್ಯಕ್ರಮಕ್ಕೆ ಸರ್ಕಾರದಿಂದ ಬರುವ ಹಣವನ್ನು ರಾಜ್ಯದ ನೆರೆ ಸಂತ್ರಸ್ತರಿಗೆ ನೀಡುವ ಉದ್ದೇಶದಿಂದ ಅರಸು ಅವರ ಜಯಂತಿಯನ್ನು ಬಹಳ ಸರಳವಾಗಿ ಆಚರಿಸಲಾಗಿದೆ ಎಂದರು.

ಅರಸು ಮುಖ್ಯಮಂತ್ರಿಯಾಗಿದ್ದ ವೇಳೆ ಅನೇಕ ಭೂ ಸುಧಾರಣೆ ಕಾಯ್ದೆ ಜಾರಿಗೆ ತಂದು ನಿರ್ಲಕ್ಷ್ಯಕ್ಕೆ ಒಳಗಾಗಿದ್ದ ಶೋಷಿತರಿಗೆ ಭೂಮಿ ಒದಗಿಸಲು ಉಳುವವನೇ ಭೂಮಿ ಒಡೆಯ ಎಂಬ ಕಾನೂನು ಜಾರಿಗೊಳಿಸಿದರು. ವೃತ್ತಿ ಜೀವನದಲ್ಲಿ ತಮ್ಮ ಸೇವೆ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಯ ಅಭಿವೃದ್ಧಿಯಾಗುವ ರೀತಿಯಲ್ಲಿ ಕೆಲಸ ಕಾರ್ಯ ಮಾಡಿದರು. ಈ ನಿಟ್ಟಿನಲ್ಲಿ ನೊಂದುಬಂದ ವ್ಯಕ್ತಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ತಿಳಿಸಿದರು.

ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಡಾ.ವಿ.ಅಶೋಕ್‌ ಕುಮಾರ್‌, ದೇವರಾಜ ಅರಸು ಅವರು ರೈತಾಪಿ ಕುಟುಂಬದಿಂದ ಜನಿಸಿದವರು. ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬ ಆಶಯದೊಂದಿಗೆ ಎಲ್ಲರಿಗೂ ಸಮಾನ ಸಾಮಾಜಿಕ, ರಾಜಕೀಯ, ಆರ್ಥಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಸಮಾನತೆ ಕಲ್ಪಿಸಿಕೊಟ್ಟವರು. ಅಂದಿನ ಪ್ರಧಾನ ಮಂತ್ರಿಯಾಗಿದ್ದ ಇಂದಿರಾಗಾಂಧಿ ಅವರು ಹೊರಡಿಸಿದ್ದ 20 ಅಂಶಗಳ ಕಾರ್ಯಕ್ರಮಗಳನ್ನು ರಾಜ್ಯದಲ್ಲಿ ಪಾರದರ್ಶಕವಾಗಿ ಅನುಷ್ಠಾನಗೊಳಿಸಿದ ಆದರ್ಶ ಪುರುಷ ಎಂದು ಬಣ್ಣಿಸಿದರು.

Advertisement

ಅಲ್ಲದೇ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಉಚಿತ ವಸತಿ ಸೌಲಭ್ಯ ಕಲ್ಪಿಸಿಕೊಡಲು ಅರಸು ಶ್ರಮಿಸಿದ್ದಾರೆ. ಜಿಪಂ ಸದಸ್ಯರಾದ ಕೆ.ಸಿ.ರಾಜಾಕಾಂತ್‌, ಜಿಪಂ ಮುಖ್ಯ ಯೋಜನಾ ಅಧಿಕಾರಿ ಮಾಧುರಾಮ್‌, ಬಿಸಿಎಂ ಇಲಾಖೆ ವ್ಯವಸ್ಥಾಪಕ ಶಿವಪ್ಪ, ಜಿಲ್ಲಾ ಉದ್ಯೋಗಾಧಿಕಾರಿ ಎಂ.ಪ್ರಸಾದ್‌, ವಾರ್ತಾಧಿಕಾರಿ ಎಂ.ಜುಂಜಣ್ಣ, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಕೃಷಿ ಕ್ಷೇತ್ರಕ್ಕೆ ದೇವರಾಜು ಅರಸು ಅವರ ಸೇವೆಯನ್ನು ರೈತರು ಎಂದಿಗೂ ಮರೆಯಲಾರರು, ಹಿಂದುಳಿದ ವರ್ಗಗಳ ಶೈಕ್ಷಣಿಕ ಅಭಿವೃದ್ಧಿಗೆ ಹಾಗೂ ರಾಜ್ಯದ ವಿದ್ಯಾರ್ಥಿ ನಿಲಯಗಳನ್ನು ಸ್ಥಾಪಿಸಿದರು. ಜೀತದಾಳು ಹಾಗೂ ಮಲ ಹೊರುವ ಪದ್ಧತಿ ನಿಷೇಧಿಸುವ ಮೂಲಕ ಪ್ರಜಾಪ್ರಭುತ್ವಕ್ಕೆ ಅರ್ಥ ಕಲ್ಪಿಸಿದರು. ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ನೀಡಿ ಸಹಾಯಧನ ನೀಡಿದರು.
-ಡಾ.ವಿ.ಅಶೋಕ್‌ ಕುಮಾರ್‌, ಜಿಲ್ಲಾಧಿಕಾರಿ, ಹಿಂದುಳಿದ ವರ್ಗಗಳ ಇಲಾಖೆ

Advertisement

Udayavani is now on Telegram. Click here to join our channel and stay updated with the latest news.

Next